Rajasthan

ಚುನಾವಣೆ ಸಮೀಪದಲ್ಲಿ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು: ರಾಜ್ಯ ಉಸ್ತುವಾರಿ ನೇತೃತ್ವದಲ್ಲಿ ಸಭೆ
ಚುನಾವಣೆ ಹೊತ್ತಲ್ಲೇ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉದ್ಬವಿಸಿದ್ದು, ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖಜೀಂದರ್ ಸಿಂಗ್ ರಾಂಧವಾ ಇಂದು ರಾಜ್ಯದ ಪಕ್ಷದ ಎಲ್ಲಾ ಸಹ-ಪ್ರಭಾರಿಗಳ ಸಭೆಯನ್ನು ಕರೆದಿದ್ದಾರೆ.

ರಾಜಸ್ಥಾನ: ಭ್ರಷ್ಟಾಚಾರ, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಸರ್ಕಾರದ ವಿರುದ್ಧ ಸಚಿನ್ ಪೈಲಟ್ 'ಜನ ಸಂಘರ್ಷ' ಯಾತ್ರೆ ಆರಂಭ
ರಾಜಸ್ಥಾನದಲ್ಲಿನ ಭ್ರಷ್ಟಾಚಾರ ಹಾಗೂ ಶಿಕ್ಷಕರ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ ಹೇರಲು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಜನ ಸಂಘರ್ಷ ಯಾತ್ರೆ ಆರಂಭಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದಲ್ಲಿ ಭಾರತೀಯ ಸೇನೆಯ ಮಿಗ್ ವಿಮಾನ ಅಪಘಾತ: ಮೂವರು ಸಾವು, ಪೈಲಟ್ ಪ್ರಾಣಾಪಾಯದಿಂದ ಪಾರು
ಭಾರತೀಯ ವಾಯುಪಡೆಯ MiG ವಿಮಾನ ಸೋಮವಾರ ರಾಜಸ್ಥಾನದಲ್ಲಿ ಪತನವಾಗಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಗ್ರಾಮಸ್ಥರು ಸಾವನ್ನಪ್ಪಿದ್ದರೆ, ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ಥಾನ: ಬಿಎಸ್ಎಫ್ ನಿಂದ ಇಬ್ಬರು ಪಾಕ್ ಡ್ರಗ್ಸ್ ಕಳ್ಳಸಾಗಣೆದಾರರ ಹತ್ಯೆ
ರಾಜಸ್ಥಾನದ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಮಾದಕ ವಸ್ತು ಕಳ್ಳಸಾಗಣೆಯಲ್ಲಿ ತೊಡಗಿದ್ದ ಇಬ್ಬರು ಶಂಕಿತ ಪಾಕಿಸ್ತಾನಿ ವ್ಯಕ್ತಿಗಳನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಹತ್ಯೆ ಮಾಡಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ...

ಸಿಎಂ ಗೆಹ್ಲೋಟ್ ಕುರಿತು ರಾವಣ ಹೇಳಿಕೆ: ಕೇಂದ್ರ ಸಚಿವ ಶೇಖಾವತ್ ವಿರುದ್ಧ ಪ್ರಕರಣ ದಾಖಲು
ಇತ್ತೀಚಿಗೆ ನಡೆದ ರ್ಯಾಲಿಯೊಂದರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕುರಿತು ನೀಡಿದ್ದ ಹೇಳಿಕೆ ಆರೋಪದ ಮೇರೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಚಿತ್ತೋರ್ಗಢದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಜಸ್ಥಾನ: ಅನಾರೋಗ್ಯದಿಂದ ಓದಲಾಗದೇ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿ, 19 ವರ್ಷದ NEET ಆಕಾಂಕ್ಷಿ ಆತ್ಮಹತ್ಯೆ!
ಅನಾರೋಗ್ಯದಿಂದ ಸರಿಯಾಗಿ ವಿಧ್ಯಾಭ್ಯಾಸ ಮಾಡಲಾಗುತ್ತಿಲ್ಲ ಎಂಬ ಕಾರಣಕ್ಕೇ 19 ವರ್ಷದ NEET (National Eligibility-cum-Entrance Test) ಆಕಾಂಕ್ಷಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಸುಡುಬಿಸಿಲ ನಡುವೆ ವಿದ್ಯುತ್'ಗೆ ಹೆಚ್ಚಿದ ಬೇಡಿಕೆ: ಉತ್ತರ ಪ್ರದೇಶ, ರಾಜಸ್ಥಾನದೊಂದಿಗೆ ರಾಜ್ಯ ಸರ್ಕಾರ ಒಪ್ಪಂದ!
ಬೇಸಿಗೆ ಆರಂಭವಾಗಿದ್ದು, ರಾಜ್ಯದಲ್ಲಿ ವಿದ್ಯುತ್'ಗೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜಸ್ಥಾನ ಹಾಗೂ ಉತ್ತರಪ್ರದೇಶ ರಾಜ್ಯಗಳೊಂದಿಗೆ 'ವಿನಿಮಯ ಒಪ್ಪಂದ'ವನ್ನು ಮಾಡಿಕೊಂಡಿದೆ.

ರಾಜಕೀಯ ನಾಯಕರ ಹಿಂಬಾಲಕರಿಂದ ಕಿರುಕುಳ: ಕಣ್ಣೀರಿಟ್ಟ ರಾಜಸ್ಥಾನದ ಟ್ರಾಫಿಕ್ ಪೋಲೀಸ್, ವಿಡಿಯೋ ವೈರಲ್!
ಚುರು ಜಿಲ್ಲೆಯಲ್ಲಿ ಸಂಚಾರಿ ದಟ್ಟಣೆಯನ್ನು ನಿಯಂತ್ರಿಸುವಾಗ ಕೆಲ ರಾಜಕೀಯ ನಾಯಕರ ಹಿಂಬಾಲಕರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಕಣ್ಣೀರಿಟ್ಟ ಟ್ರಾಫಿಕ್ ಕಾನ್ಸ್ಟೆಬಲ್ ವೈರಲ್ ವೀಡಿಯೊವನ್ನು ಆಧರಿಸಿ ರಾಜಸ್ಥಾನ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

