ದೇಶಲಡಾಖ್ನಲ್ಲಿ ಜನರ ಭೂಮಿಯನ್ನು ಚೀನಾ ಕಿತ್ತುಕೊಂಡಿದೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ
ಲಡಾಖ್ನಲ್ಲಿ ಚೀನಾವು ಜನರ ಭೂಮಿಯನ್ನು ಕಬಳಿಸಿದೆ ಎಂದು ಇಲ್ಲಿಗೆ ಭೇಟಿ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. 'ಚೀನಾ ಇಲ್ಲಿನ ಭೂಮಿಯನ್ನು ವಶಪಡಿಸಿಕೊಂಡಿದ್ದು, ಜನರು ತೀವ್ರ ತೊಂದರೆಗೊಳಗಾಗಿದ್ದಾರೆ. ಚೀನಾದ ಪಡೆಗಳು ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಿವೆ ಎಂದು ಜನರೇ ಹೇಳುತ್ತಿದ್ದಾರೆ' ಎಂದು ಅವರು ಹೇಳಿದರು.