ದೇಶಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ಅರ್ಜಿ: ಶೀಘ್ರವೇ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಭರವಸೆ
2002ರ ಗೋಧ್ರಾ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಮಂಗಳವಾರ ಸುಪ್ರೀಂ ಕೋರ್ಟ್ ಭರವಸೆ ನೀಡಿದ್ದು, 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಆಕೆಯ ಅರ್ಜಿಯನ್ನು ಹೊಸ ಪೀಠದ ರಚನೆಯ ನಂತರ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದಿದೆ.