road accident

ಜಾತ್ರೆಗೆ ಹೊರಟವರ ಕ್ರೂಸರ್ಗೆ ಬಸ್ ಡಿಕ್ಕಿ: ಬಾಲಕ ಸಾವು, ಐವರಿಗೆ ಗಾಯ
ಮನೆದೇವರ ಜಾತ್ರೆಗೆ ಹೊರಟಿದ್ದವರ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಬಳಿ ಬುಧವಾರ ಬೆಳಗಿನಜಾವ ಸಂಭವಿಸಿದೆ.

ರಾಮನಗರ: ಭೀಕರ ರಸ್ತೆ ಅಪಘಾತ: ಮೂವರ ಸಾವು
ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದ ರಾಯರದೊಡ್ಡಿ ಬಳಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಶನಿವಾರ ತಡರಾತ್ರಿ ಸಂಭವಿಸಿದೆ.

ಗೋಕಾಕ್ ಬಳಿ ರಸ್ತೆ ಅಪಘಾತ: ಮೂವರು ಸಾವು
ಜಿಲ್ಲೆಯ ಗೋಕಾಕ್ ತಾಲ್ಲೂಕಿನಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.

ಹರಿಯಾಣದ ಅಂಬಾಲಾದಲ್ಲಿ ಭೀಕರ ರಸ್ತೆ ಅಪಘಾತ; ಇಬ್ಬರು ಪೋಲಿಸರು ಸೇರಿ ನಾಲ್ವರು ಸಾವು
ಹರಿಯಾಣದ ಅಂಬಾಲಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

2019ರಲ್ಲಿ ಭಾರತದಲ್ಲಿ 4.49 ಲಕ್ಷ ರಸ್ತೆ ಅಪಘಾತ, 1.51 ಲಕ್ಷ ಸಾವು!
ಭಾರತದಲ್ಲಿ 2019ರಲ್ಲಿ ಒಟ್ಟು 4,49,002 ರಸ್ತೆ ಅಪಘಾತಗಳು ಸಂಭವಿಸಿದ್ದು 1,51,113 ಸಾವುಗಳು ಸಂಭವಿಸಿವೆ. 2018ಕ್ಕೆ ಹೋಲಿಸಿದರೆ 2019ರಲ್ಲಿ ಇಂತಹ ರಸ್ತೆ ಅಪಘಾತಗಳು ಕಡಿಮೆಯಾಗುತ್ತಿವೆ ಎಂದು ಸಂಸತ್ತಿಗೆ ಸೋಮವಾರ ತಿಳಿಸಲಾಗಿದೆ.

ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತ, ಇಬ್ಬರು ಸಾವು
ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಚಿಕ್ಕಮಗಳೂರಿನ ರಾಮನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ತುಮಕೂರಿನಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿ: ಮಹಿಳೆ ಸೇರಿ ಇಬ್ಬರು ಸಾವು
ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕು ಸಾಗರನಹಳ್ಳಿ ಗೇಟ್ ಸಮೀಪ ನಡೆದಿದೆ.

ಆಂಧ್ರದಲ್ಲಿ ಲಾರಿಗೆ ಕಾರು ಡಿಕ್ಕಿ: 5 ತಿಂಗಳ ಮಗು ಸೇರಿ ನಾಲ್ವರು ದುರ್ಮರಣ
ಜಿಲ್ಲೆಯ ಪೆದ್ದಾಪುರಂ ಹೊರವಲಯದಲ್ಲಿ ಜಲ್ಲಿ ಕಲ್ಲು ತುಂಬಿದ್ದ ಲಾರಿಗೆ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದು ಅದರಲ್ಲಿ ಪ್ರಯಾಣಿಸುತ್ತಿದ್ದ ಐದು ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಐವರು ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ.

ಮಿನಿ ಟ್ರಕ್ ಪಲ್ಟಿ: ಆರು ವರ್ಷದ ಮಗು ಸೇರಿ ಮೂವರು ದುರ್ಮರಣ
ಮಿನಿ ಟ್ರಕ್ ಪಲ್ಟಿಯಾಗಿ ಆರು ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ.

