road accident

ರಸ್ತೆ ವಿಭಜಕಕ್ಕೆ ಲಾರಿ ಡಿಕ್ಕಿ: ಬೈಕ್ ನಲ್ಲಿ ಹೋಗುತ್ತಿದ್ದ ಪೊಲೀಸ್ ಪೇದೆ ದುರ್ಮರಣ
ಕಳೆದ ರಾತ್ರಿ ನಡೆದ ರಸ್ತೆ ಅಪಘಾತವೊಂದರಲ್ಲಿ ನಂದಿನಿ ಲೇಔಟ್ ಪೊಲೀಸ್ ಠಾಣೆಯ ಮುಖ್ಯಪೇದೆ ಭಕ್ತರಾಮ್ ಎಂಬವರು ಮೃತಪಟ್ಟಿದ್ದಾರೆ

ಚೆನ್ನಪಟ್ಟಣ: ಬೈಕ್‌ಗೆ ಕಾರು ಡಿಕ್ಕಿ, ಇಬ್ಬರು ದುರ್ಮರಣ
ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಚೆನ್ನಪಟ್ಟಣ ಬಳಿಯ ಶಿವಳ್ಳಿ ಹೋಟೆಲ್ ಮುಂಭಾಗ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಹಾಸನ: ಭೀಕರ ಸರಣಿ ಅಪಘಾತದಲ್ಲಿ ಮೂವರು ದುರ್ಮರಣ
ಅರಸೀಕೆರೆ ತಾಲೂಕಿನ ಸೂಳೆಕೆರೆ ಬಳಿ ಸಾರಿಗೆ ಬಸ್ ಸೇರಿ ಮೂವರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.

ಧಾರವಾಡದಲ್ಲಿ ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ
ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಸುಳ್ಯ ಬಳಿ ರಸ್ತೆ ಅಪಘಾತ: ಉತ್ತರ ಪ್ರದೇಶ ಮೂಲದ ಇಬ್ಬರು ಸಾವು
ಸುಳ್ಯ ತಾಲ್ಲೂಕಿನ ಅಜ್ಜವಾರ ಗ್ರಾಮದ ಮೆನಾಲ ಸಮೀಪ ಬೈಕ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಒಡಿಶಾದಲ್ಲಿ ಭೀಕರ ಅಪಘಾತ: ರಸ್ತೆ ಕಾಮಗಾರಿ ನಡೆಸುತ್ತಿದ್ದ ಐವರು ಮಹಿಳಾ ಕಾರ್ಮಿಕರು ಸಾವು
ದುರ್ಘಟನೆಯೊಂದರಲ್ಲಿ ಕಾರೊಂದು ರಸ್ತೆ ವಿಭಜಕ ದಾಟಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಪರಿಣಾಮ ಐವರು ಮಹಿಳೆಯರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ಬುಧವಾರ ನಡೆದಿದೆ.

ಮಂಡ್ಯ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಮಹಿಳೆ ಸಾವು
ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಬೆಂಗಳೂರು: ಬೈಕ್ ಗೆ ಲಾರಿ ಡಿಕ್ಕಿ, ಸವಾರ ಸಾವು
ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದಾಗ ಬೈಕ್ ಸವಾರನಿಗೆ ಸೇನಾಪಡೆಗೆ ಸೇರಿದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದುರ್ಘಟನೆ ಜಯಮಹಲ್ ರಸ್ತೆಯ ಅಮಾನುಲ್ಲಾ ಗೇಟ್ ಬಳಿ ಶುಕ್ರವಾರ ಸಂಭವಿಸಿದೆ.

ಬೆಳಗಾವಿ: ಟ್ರಕ್ - ಟೆಂಪೊ ನಡುವೆ ಡಿಕ್ಕಿ, ಮೂವರು ಸಾವು, ನಾಲ್ವರಿಗೆ ಗಾಯ
ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸೋಮನಟ್ಟಿ ಕ್ರಾಸ್ ಬಳಿ ಟ್ರಕ್ ಮತ್ತು ಟೆಂಪೊ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

