Russia, China

ಲಡಾಖಿಗಳು ಚೀನಾ ಭೂ ಅತಿಕ್ರಮಣ ಮಾಡಿದೆ ಅಂತಿದಾರೆ, ಮೋದಿ ಬೇರೇನೆ ಹೇಳುತ್ತಿದ್ದಾರೆ, ಇವರಲ್ಲಿ ಒಬ್ಬರದ್ದು ಸುಳ್ಳು: ರಾಹುಲ್
ಲಡಾಖ್ ಗಡಿಯಲ್ಲಿ ದೇಶದ ಭೂ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂಬ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ವಾಗ್ದಾಳಿ ನಡೆಸಿದ್ದಾರೆ.

ಲಡಾಕ್ ನಲ್ಲಿ ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ: ಪ್ರಧಾನಿ ನರೇಂದ್ರ ಮೋದಿ
ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್‌ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಚೀನಾದಿಂದ ವಿದ್ಯುತ್ ಉಪಕರಣಗಳ ಆಮದು ನಿಲ್ಲಿಸಿದ ಭಾರತ
ಗಡಿ ಪ್ರದೇಶದಲ್ಲಿ ಭಾರತದ ಭೂಭಾಗವನ್ನು ಅತಿಕ್ರಮಿಸುತ್ತಿರುವ ಚೀನಾಗೆ ಪಾಠ ಕಲಿಸಲು ಮುಂದಾಗಿರುವ ಭಾರತ ಅಲ್ಲಿನ ವಿದ್ಯುತ್ ಉಪಕರಣಗಳ ಆಮದನ್ನು ನಿಲ್ಲಿಸುತ್ತಿರುವುದಾಗಿ ಘೋಷಿಸಿದೆ.

ನಿಮ್ಮ ಶೌರ್ಯ ವಿಶ್ವಕ್ಕೇ ಒಂದು ಸಂದೇಶ ರವಾನಿಸಿದೆ: ಲಡಾಖ್ ನಲ್ಲಿ ಭಾರತೀಯ ಯೋಧರನ್ನು ಕೊಂಡಾಡಿದ ಪ್ರಧಾನಿ ಮೋದಿ
ವಿಶ್ವಾದ್ಯಂತ ಭಾರತೀಯ ಸೈನಿಕರ ಶೌರ್ಯದ ಬಗ್ಗೆ ಚರ್ಚೆಯಾಗುತ್ತಿದೆ. ಭಾರತ ಮಾತೆಯ ವಿರೋಧಿಗಳು ನಿಮ್ಮ ತಾಕತ್ತು, ಕೋಪವನ್ನು ನೋಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಶಾಂತಿ ಮಾತುಕತೆ ಸಂದರ್ಭದಲ್ಲಿ ಆಕ್ರಮಣಕಾರಿ ವರ್ತನೆ ಸಲ್ಲದು: ಪ್ರಧಾನಿ ಮೋದಿ ಲಡಾಖ್ ಭೇಟಿ ಬಗ್ಗೆ ಚೀನಾ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ಅವರ ಹಠಾತ್ ಲಡಾಖ್ ಭೇಟಿ ಕುರಿತಂತೆ ಪ್ರತಿಕ್ರಿಯಿಸಿರುವ ಚೀನಾ, ಗಡಿ ಘರ್ಷಣೆ ಹಾಗೂ ಗಡಿ ತಕರಾರಿನ ಕುರಿತು ಭಾರತದೊಂದಿಗೆ ಶಾಂತಿಯುತ ಮಾತುಕತೆಗಳು ಮುಂದುವರೆದಿವೆ ಎಂದು ಹೇಳಿದೆ.

ಲಡಾಖ್ ನಲ್ಲಿ ಚೀನಾ-ಭಾರತ ಸಂಘರ್ಷ: ಗಲ್ವಾನ್ ಕಣಿವೆ ಪ್ರದೇಶಕ್ಕೆ ಪ್ರಧಾನಿ ಮೋದಿ ಹಠಾತ್ ಭೇಟಿ
ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್'ಗೆ ಭೇಟಿ ನೀಡಿದ್ದಾರೆ.

ರಕ್ಷಣ ಸಚಿವ ರಾಜನಾಥ್ ಸಿಂಗ್ ಲಡಾಖ್ ಭೇಟಿ ಮುಂದೂಡಿಕೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಲಡಾಖ್ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. ಗ್ಯಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷವಾದ ಬಳಿಕ ಶುಕ್ರವಾರ ರಾಜನಾಥ್ ಸಿಂಗ್ ಲಡಾಖ್ ಗೆ ತೆರಳಲಿದ್ದಾರೆ ಎಂದು ಹೇಳಲಾಗಿತ್ತು.

ಭಾರತದ ಮೇಲೆ ಕೆಟ್ಟ ಕಣ್ಣು ಹಾಕಿದರೆ ತಕ್ಕ ಶಾಸ್ತಿ: ಚೀನಾ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್
ಚೀನಾ ಆ್ಯಪ್ ಗಳ ಬ್ಯಾನ್ ನ್ನು 'ಡಿಜಿಟಲ್ ಸ್ಟ್ರೈಕ್ ' ಎಂದು ಕರೆದಿರುವ ಕೇಂದ್ರ ಸಂವಹನ ಸಚಿವ ರವಿಶಂಕರ್ ಪ್ರಸಾದ್, ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ, ಯಾರಾದರೂ ಕೆಟ್ಟ ಕಣ್ಣು ಹಾಕಿದರೆ ಅವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಚೀನಾದ ವಿರುದ್ಧ ಹರಿಹಾಯ್ದಿದ್ದಾರೆ.

2036ರವರೆಗೂ ರಷ್ಯಾ ಅಧ್ಯಕ್ಷರಾಗಿ ವ್ಲಾದಿಮಿರ್ ಪುಟಿನ್ ಮುಂದುವರಿಕೆ?
2036ರವರೆಗೂ ರಷ್ಯಾದ ಅಧ್ಯಕ್ಷರಾಗಿ ವ್ಲಾದಿಮಿರ್ ಪುಟಿನ್ ಅವರು ಮುಂದುವರೆಯಲು ರಷ್ಯಾ ಜನತೆ ತಮ್ಮ ಮತ ಚಲಾಯಿಸುವ ಮೂಲಕ ಹಾದಿಯನ್ನು ಸುಗಮಗೊಳಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

