Satish Jarakiholi

ರೈತರು-ಸಕ್ಕರೆ ಕಾರ್ಖಾನೆಗಳ ನಡುವೆ ಸಂಘರ್ಷ ಅಂತ್ಯ: ಪ್ರತಿ ಟನ್ ಕಬ್ಬಿಗೆ ₹3600 ದರ ನಿಗದಿ- ಸಚಿವ ಸತೀಶ್ ಜಾರಕಿಹೊಳಿ
ಈ ನಿರ್ಧಾರದಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಮತ್ತು ಸಕ್ಕರೆ ಕಾರ್ಖಾನೆಗಳ ನಡುವಿನ ತಿಕ್ಕಾಟ ತಣ್ಣಗಾಗಿದ್ದು, ಕಬ್ಬು ನುರಿಸುವ ಹಂಗಾಮು ಸುಗಮವಾಗಿ ಆರಂಭವಾಗುವ ಹಾದಿ ಸುಗಮವಾಗುವ ನಿರೀಕ್ಷೆ.

SIR ವಿಚಾರದಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಒಂದು ನಿಲುವು, ದೆಹಲಿಯಲ್ಲಿ ಮತ್ತೊಂದು ನಿಲುವು: ಅಸಾದುದ್ದೀನ್ ಒವೈಸಿ; Video
ಎಸ್ಐಆರ್ ವಿಚಾರದಲ್ಲಿ ಕಾಂಗ್ರೆಸ್ ವಿವಿಧ ರಾಜ್ಯಗಳು ಹಾಗೂ ನಗರಗಳಲ್ಲಿ ಬೇರೆ ಬೇರೆ ನಿಲುವುಗಳನ್ನು ತಾಳುತ್ತಿದೆ ಎಂದು ಆರೋಪಿಸಿದರು.

SIR ಕುರಿತು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸತೀಶ್ ಜಾರಕಿಹೊಳಿ; Video
ಈ ಸಂಬಂಧ ವಿವರವಾದ ಲಿಖಿತ ಹೇಳಿಕೆ ಹಾಗೂ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ತಮ್ಮ ಹಿಂದಿನ ಹೇಳಿಕೆಯನ್ನು ‘ತಪ್ಪಾಗಿ ಅರ್ಥೈಸಲಾಗಿದೆ’ ಎಂದು ತಿಳಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯನ್ನು ಸಮರ್ಥಿಸುವ ಉದ್ದೇಶ ತಮಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

'ಸತೀಶ್ ಜಾರಕಿಹೊಳಿ ಬಳಿ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ, ಕರ್ನಾಟಕದಲ್ಲಿ SIR ಪಿತೂರಿ ನಡೆದಿದೆ': ಪ್ರಿಯಾಂಕ್ ಖರ್ಗೆ; Video
ರಾಜ್ಯದ ಮತದಾರರ ಪಟ್ಟಿಯಿಂದ ಭಾರಿ ಸಂಖ್ಯೆಯಲ್ಲಿ ಹೆಸರುಗಳನ್ನು ತೆಗೆದುಹಾಕಿರುವ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ.

'ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ; ಬೇರೆ ರಾಜ್ಯಗಳ ಬಗ್ಗೆ ನಮ್ಮ ಆಕ್ಷೇಪ': ಸಚಿವ ಸತೀಶ್ ಜಾರಕಿಹೊಳಿ ವ್ಯತಿರಿಕ್ತ ಹೇಳಿಕೆ; Video
ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಿರುವುದು ಸಮರ್ಥನೀಯ ಎಂದು ಹೇಳಿರುವ ಅವರು, ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಹೂಡಿಕೆಗಳ ಜಾಡು; ಆಫ್ರಿಕಾದ ಕಾಂಗೋ ತನಿಖೆಯ ಕೇಂದ್ರಬಿಂದು: ED ಎಕ್ಸ್ ಪೋಸ್ಟ್ ನಲ್ಲಿ ಏನಿದೆ?
ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಪುತ್ರ ರಾಹುಲ್ ಜಾರಕಿಹೊಳಿ ಹಾಗೂ ಅಬಕಾರಿ ಜಂಟಿ ಆಯುಕ್ತ ವೈ.ಡಿ. ಮಂಜುನಾಥ್ ಅವರ ಪತ್ನಿ ಮಹಾದೇವಿ ಮಂಜುನಾಥ್ ಮತ್ತು ಕುಟುಂಬ ಸದಸ್ಯರು ಹಲವು ವಿದೇಶಿ ಸಂಸ್ಥೆಗಳಲ್ಲಿ ಷೇರುಪಾಲುಗಳನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ED ತಿಳಿಸಿದೆ.

'ಅವ್ರಿಗೆ ಸಾತ್ ಖೂನ್ ಮಾಫ್, ಬಿಜೆಪಿಗೆ ಭ್ರಷ್ಟ ರಾಜಕಾರಣಿಗಳು ಹೋದ ತಕ್ಷಣ ಗಂಗಾ ಜಲದಿಂದ ಪವಿತ್ರ ಆಗ್ಬಿಡ್ತಾರೆ': ಪ್ರಿಯಾಂಕ್ ಖರ್ಗೆ; Video
ಇಂತಹ 196 ಇಡಿ ದಾಳಿಗಳು ಆಗಿವೆ ಎಂದು ನಾನು ಅಂಕಿ ಅಂಶ ಕೊಟ್ಟಿದ್ದೆ. ಎರಡು ಕೇಸ್ನಲ್ಲಿ ಮಾತ್ರ ಶಿಕ್ಷೆ ಆಗಿದೆ. ಎಲ್ಲಾ 196 ದಾಳಿಗಳಿಗೂ ಪ್ರೆಸ್ ನೋಟ್ ಬಿಡುಗಡೆ ಮಾಡಿದ್ದಾರೆ ಅಲ್ವಾ? ಶಿಕ್ಷೆ ಪ್ರಮಾಣ ಯಾಕೆ ಇಷ್ಟು ಕಮ್ಮಿ ಇದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

'ಎದೆಗುಂದಬೇಡಿ, ಧೈರ್ಯವಾಗಿರಿ': ED ದಾಳಿ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಿಎಂ ಸೇರಿ ಕಾಂಗ್ರೆಸ್ ನಾಯಕರ ಭೇಟಿ, ಅಭಯ; Video
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸತೀಶ್ ಅವರ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿರುವ ನಿವಾಸದ ಮೇಲೆ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ, ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ಅವರಿಗೆ ಸಂಬಂಧಿಸಿದಂತಹ ಸ್ಥಳಗಳ ಮೇಲೂ ದಾಳಿ ನಡೆಸಿದ್ದರು.

ವಿರೋಧ ಪಕ್ಷದ ದಲಿತ ನಾಯಕರನ್ನು ಬೆದರಿಸಲು ತನಿಖಾ ಸಂಸ್ಥೆಗಳ ದುರ್ಬಳಕೆ: ಬಿ.ಕೆ ಹರಿಪ್ರಸಾದ್; Video
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿ ನಡೆಯುತ್ತಿರುವ ಹೊಸ ತನಿಖೆಯ ಭಾಗವಾಗಿ ಕರ್ನಾಟಕದ ಸುಮಾರು 18 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

