Sonia Gandhi

ನನ್ನ ಮೇಲಿನ ದಾಳಿಗೆ ಸೋನಿಯಾ ಗಾಂಧಿಯೇ ನೇರ ಕಾರಣ: ಅರ್ನಾಬ್ ಗೋಸ್ವಾಮಿ
ಕೆಲಸ ಮುಗಿಸಿ ತಮ್ಮ ಪತ್ನಿಯೊಂದಿಗೆ ಕಾರಿನಲ್ಲಿ ಹೊರಟ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಅವರ ಪತ್ನಿ ಸನಿಯಾ ಗೋಸ್ವಾಮಿ ವಿರುದ್ಧ ನಡೆದ ದಾಳಿಗೆ ಸಂಬಂಧಿಸಿದಂತೆ ಸ್ವತಃ ಅರ್ನಾಬ್ ಗೋಸ್ವಾಮಿಯವರೇ ವಿಡಿಯೊ ಸಂದೇಶದ ಮೂಲಕ ಟ್ವೀಟ್ ಮಾಡಿದ್ದಾರೆ.

ಸೋನಿಯಾ ವಿರುದ್ಧ ಆರೋಪ: ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್!
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸಮಾಲೋಚನಾ ತಂಡ ರಚಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ: ಮಾಜಿ ಪ್ರಧಾನಿ ಡಾ.ಸಿಂಗ್ ಅಧ್ಯಕ್ಷ
ಕಾಂಗ್ರೆಸ್ ನ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಕಾಂಗ್ರೆಸ್ ಸಮಾಲೋಚನಾ ತಂಡವನ್ನು ರಚಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಕೋವಿದ್-19 ವಾರಿಯರ್ಸ್ ಗೆ ಸಲಾಂ: ಲಾಕ್ ಡೌನ್ ನಿಯಮ ಪಾಲಿಸಲು ದೇಶವಾಸಿಗಳಿಗೆ ಸೋನಿಯಾ ಕರೆ
ಕೊರೋನಾ ಸಾಂಕ್ರಾಮಿಕ ರೋಗವನ್ನು ಹೊಡೆದೋಡಿಸಲು ತಮ್ಮೆಲ್ಲಾ ಶಕ್ತಿ ಸಾಮಾರ್ಥ್ಯ ಮೀರಿ ಶ್ರಮಿಸುತ್ತಿರುವ ವೈದ್ಯರು, ನೈರ್ಮಲ್ಯ ಕಾರ್ಮಿಕರು, ಪೊಲೀಸರು ಮತ್ತು ಈ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರನ್ನು ವೀಡಿಯೊ ಸಂದೇಶದ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶ್ಲಾಘಿಸಿದ್ದಾರೆ.

ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರ ನಿರ್ವಹಿಸಲು ಸಿದ್ಧ: ಸೋನಿಯಾಗಾಂಧಿ
ಸೋಂಕಿನ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವನ್ನು ನಿರ್ವಹಿಸಲು ಸಿದ್ಧವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಹೇಳಿದ್ದು, ಸವಾಲನ್ನು ಎದುರಿಸಲು ಸರ್ಕಾರ ಸಮಗ್ರ ಯೋಜನೆ ರೂಪಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಕೊರೋನಾ ವಿರುದ್ಧ ಸಮರಕ್ಕಾಗಿ ಹಣ ಉಳಿತಾಯ-ಸರ್ಕಾರಕ್ಕೆ 5 ಅಂಶಗಳ ಸಲಹೆ ನೀಡಿದ ಸೋನಿಯಾ ಗಾಂಧಿ
ಕೊರೋನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಹಣವನ್ನು ಕಾಪಿಡಲು ಐದು ಕ್ರಮಗಳನ್ನು ಸೂಚಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ, ಇದರಲ್ಲಿ ಸರ್ಕಾರ ಹಾಗೂ ಸಾರ್ವಜನಿಕ ವಲಯದ ಘಟಕಗಳು ಎರಡು ವರ್ಷಗಳ ಕಾಲ ಮಾಧ್ಯಮ ಜಾಹೀರಾತುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಗಳನ್ನು ಸುಂದರಗೊಳಿಸುವ ಯೋಜನೆಯಾಗಿರುವ

ಲಾಕ್ ಡೌನ್ ವಿಚಾರದಲ್ಲಿ ಸೋನಿಯಾ ಗಾಂಧಿ ಟೀಕೆ ದುರದೃಷ್ಟಕರ: ಜಾವ್ಡೆಕರ್
ಕೊರೋನಾ ವೈರಸ್ ನಿಯಂತ್ರಣ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಅನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಾಡಿರುವ ಟೀಕೆ ದುರದೃಷ್ಟಕರ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ

ಲಾಕ್ ಡೌನ್ ಗೆ ಸೋನಿಯಾ ಬೆಂಬಲ: ವೈದ್ಯರ ಸುರಕ್ಷತೆ ಬಗ್ಗೆ ಕ್ರಮ ಕೈಗೊಳ್ಳಲು ಮೋದಿಗೆ ಪತ್ರ
ಕೊರೋನಾವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 21 ದಿನಗಳ ಲಾಕ್ ಡೌನ್ ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೊರೋನಾ ವೈರಸ್ ಪೀಡಿತರ ಸಹಾಯಕ್ಕೆ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಿ:ಸರ್ಕಾರಕ್ಕೆ ಸೋನಿಯಾ ಗಾಂಧಿ ಒತ್ತಾಯ
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತಗೊಳ್ಳಬಾರದು. ಈ ವಿಷಮ ಸ್ಥಿತಿಯಲ್ಲಿ ದೇಶ ತಲೆಬಾಗಬಾರದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

