ರಾಜ್ಯಸರ್ಕಾರದ ಯೋಜನೆ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಆರೋಪ; ಹಿಂದಿ ಸುದ್ದಿ ವಾಹಿನಿ, ಕನ್ಸಲ್ಟಿಂಗ್ ಎಡಿಟರ್ ವಿರುದ್ಧ ಎಫ್ಐಆರ್
ಅಲ್ಪಸಂಖ್ಯಾತರಿಗೆ ವಾಣಿಜ್ಯ ವಾಹನ ಖರೀದಿಗೆ ಸಬ್ಸಿಡಿ ನೀಡುವ ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿ ಮತ್ತು ಅದರ ಪ್ರಧಾನ ಸಂಪಾದಕರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.