Students

ಜೆಎನ್'ಯು ಹಿಂಸಾಚಾರ: ಬೀದಿಗಿಳಿದು ವಿದ್ಯಾರ್ಥಿಗಳ ಆಕ್ರೋಶ, ಮಹತ್ವದ ಸುಳಿವು ಸಂಗ್ರಹಿಸಿದ ಪೊಲೀಸರು
ರಾಜಧಾನಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಲು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಅನಾಮಧೇಯ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ.

ಜೆಎನ್'ಯು ದಾಳಿ: ಹಿಂಸಾಚಾರದ ವಿರುದ್ಧ ಒಗ್ಗೂಡಿದ ವಿದ್ಯಾರ್ಥಿ ಸಂಘಟನೆಗಳು, ಮುಂಬೈ, ಪುಣೆಯಲ್ಲಿ ಪ್ರತಿಭಟನೆ
ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ದೇಶದ ಹಲವು ವಿದ್ಯಾರ್ಥಿ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದ ಮುಂಬೈ, ಪುಣೆ ಸೇರಿದಂತೆ ಹಲವೆಡೆ ಇದೀಗ ಪ್ರತಿಭಟನೆಗಳು ಆರಂಭಗೊಂಡಿವೆ.

ಬಂಟ್ವಾಳ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸಿಬ್ಬಂದಿ ಬಂಧನ
ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕಾಲೇಜಿನ ಬೋಧಕೇತರ ಸಿಬ್ಬಂದಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಉನ್ನತ ಶ್ರೇಣಿ ಪಡೆದ ಸರ್ಕಾರಿ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರದಿಂದ ಟ್ಯಾಬ್, ಕಂಪ್ಯೂಟರ್!
ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಟ್ಯಾಬ್ ಲೆಟ್ ಹಾಗೂ ಕಂಪ್ಯೂಟರ್ ಗಳನ್ನು ವಿತರಣೆ ಮಾಡಿದೆ.

ಅತೀ ಹೆಚ್ಚು ಅಂಕ ಪಡೆದ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್ಸೈಟ್ನಲ್ಲಿ ಪ್ರಕಟ
ಇನ್ನು ಮುಂದೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಸಚಿವ ಸುರೇಶ್ಕುಮಾರ್ ಪರೀಕ್ಷಾ ಮಂಡಳಿಗೆ ಆದೇಶ ನೀಡಿದ್ದಾರೆ.

ದೆಹಲಿ ವಿದ್ಯಾರ್ಥಿಗಳಿಗೆ ಪಿಜಿ ಖಾಲಿ ಮಾಡಲು ಹೇಳದ್ರಾ ಪೊಲೀಸರು?: ವೈರಲ್ ವಿಡಿಯೋ ಅಸಲಿಯತ್ತೇನು? ಇಲ್ಲಿದೆ ಮಾಹಿತಿ
ದೆಹಲಿ ಪೊಲೀಸರು ಮುಖರ್ಜಿ ನಗರ್ ಏರಿಯಾದಲ್ಲಿರುವ ವಿದ್ಯಾರ್ಥಿಗಳಿಗೆ ಪಿಜಿ ತೊರೆಯುವಂತೆ ಹೇಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಚಾಮರಾಜನಗರ ಗಿರಿಜನ ಹಾಸ್ಟೆಲ್ ನಿಂದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ
ಚಾಮರಾಜನಗರ ಜಿಲ್ಲೆಯಲ್ಲಿನ ಗಿರಿಜನ ಹಾಸ್ಟೆಲ್ ನಿಂದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ.

ಜಾಮಿಯಾ ವಿ.ವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ದೇಶಾದ್ಯಂತ ಭಾರೀ ಪ್ರತಿಭಟನೆ, ಒಗ್ಗಟ್ಟು ಪ್ರದರ್ಶಿಸಿದ ವಿದ್ಯಾರ್ಥಿಗಳು
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಳೆದ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕ್ರಮವನ್ನು ಖಂಡಿಸಿ ದೇಶಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆ ಮಂಗಳವಾರ ತೀವ್ರವಾಗಿದೆ.

ನೀವು ಏಕಾಂಗಿಯಲ್ಲ, ನಿರಾಶರಾಗಿ ಧೈರ್ಯಗುಂದಬೇಡಿ: ವಿದ್ಯಾರ್ಥಿಗಳಿಗೆ ಉಪ ಕುಲಪತಿ ಭರವಸೆ
ಯಾವುದೇ ಪೂರ್ವಾನುಮತಿಯಿಲ್ಲದೆ ಪೊಲೀಸರು ವಿಶ್ವವಿದ್ಯಾಲಯ ಕ್ಯಾಂಪಸ್ ನೊಳಗೆ ಪ್ರವೇಶಿಸುವುದು, ಗ್ರಂಥಾಲಯದಲ್ಲಿ ಕುಳಿತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡುವುದು ಖಂಡಿತಾ ಒಪ್ಪತಕ್ಕಂತಹ ನಡವಳಿಕೆಯಲ್ಲ, ಹೀಗೆಂದು ಹೇಳಿದ್ದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಉಪ ಕುಲಪತಿ.

