Suicide

ಮಾಜಿ ಮ್ಯಾನೇಜರ್ ದಿಶಾ ಸಾವಿನ ಬೆನ್ನಲ್ಲೇ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ, ಕಾಡಿತ್ತ ಸಾವಿನ ನೋವು?
ಎಂಎಸ್ ಧೋನಿ ಚಿತ್ರದ ಮೂಲಕ ಬಾಲಿವುಡ್ ನಲ್ಲಿ ಭರವಸೆ ನಟನಾಗಿದ್ದ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರು ಮೃತಪಟ್ಟ ನಾಲ್ಕು ದಿನಗಳಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತ್ನಿಯನ್ನು ಕೊಂದು ನಿವೃತ್ತ ಪೊಲೀಸ್ ಅಧಿಕಾರಿ ಆತ್ಮಹತ್ಯೆ
ಪತ್ನಿಯನ್ನು ಕೊಂದು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ತಾವು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ಬೆಂಗಳೂರು: ಮೇಲ್ಸೇತುವೆಯಿಂದ ಜಿಗಿದು ಕೊರೋನಾ ರೋಗಿ ಆತ್ಮಹತ್ಯೆ
ಚಂದ್ರಾ ಲೇಔಟ್ ಮೇಲ್ಸೇತುವೆಯಿಂದ ಜಿಗಿದು 40 ವರ್ಷದ ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅತಿಯಾಗಿ ಟಿವಿ ನೋಡುತ್ತಿದ್ದ ಮಗನಿಗೆ ಬೈದ ತಾಯಿ: 14 ವರ್ಷದ ಬಾಲಕ ಆತ್ಮಹತ್ಯೆಗೆ ಶರಣು!
ಅತಿಯಾಗಿ ಟಿವಿ ನೋಡುತ್ತಿದ್ದ ಮಗನಿಗೆ ತಾಯಿಯೊಬ್ಬಳು ಬೈದು ಬುದ್ದಿ ಹೇಳಿದ ಕಾರಣಕ್ಕೆ ನೊಂದ 14 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ತಮಿಳುನಾಡು: ಗಂಡು ಮಗುವಾಗಲಿಲ್ಲ ಎಂದು ಮೂರು ತಿಂಗಳ ಹೆಣ್ಣು ಮಗುವನ್ನು ಕೊಂದು ತಾಯಿ ಆತ್ಮಹತ್ಯೆ
ಮೂರು ತಿಂಗಳ ಹೆಣ್ಣು ಮಗವನ್ನು ಕೊಂದು 34 ವರ್ಷದ ಮಹಿಳೆ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಲಾಕ್‌ಡೌನ್ ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ
ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬ ತೀವ್ರ ಖಿನ್ನತೆಗೊಳಗಾಗಿ ಆತ್ಮಹತ್ಯೆಕ್ಕೆ ಶರಣಾಗಿರುವ ಘಟನೆ ಈ ಜಿಲ್ಲೆಯ ತೆನುಘಾಟ್ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾರಾಷ್ಟ್ರ: ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಇಬ್ಬರ ಶವ ಪತ್ತೆ, ಆತ್ಮಹತ್ಯೆ ಶಂಕೆ
ಮಹಾರಾಷ್ಟ್ರದ ಸರ್ಕಾರಿ ಇಂಜಿನೀಯರ್ ಕಾಲೇಜಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿದ್ದ 30 ವರ್ಷದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮತ್ತೊಬ್ಬ ವ್ಯಕ್ತಿ ಶವ ಪತ್ತೆಯಾಗಿದೆ.

ಉತ್ತರ ಪ್ರದೇಶ: ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ವಲಸೆ ಕಾರ್ಮಿಕ ಆತ್ಮಹತ್ಯೆಗೆ ಶರಣು!
ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ ವಲಸೆ ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಸ್ಮಾರ್ಟ್'ಫೋನ್ ಖರೀದಿಸಲು ಒಲ್ಲೆ ಎಂದ ಪತಿ: ಆತ್ಮಹತ್ಯೆಗೆ ಶರಣಾದ ಪತ್ನಿ!
ಸ್ಮಾರ್ಟ್'ಫೋನ್ ಖರೀದಿಸಲು ಪತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಪತ್ನಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಮೈದಾನ್ ಗರ್ಹಿ ಪ್ರದೇಶದಲ್ಲಿ ನಡೆದಿದೆ.

