Tamil Nadu

ಚೆನ್ನೈ: ಎಂಟಿಸಿ ಬಸ್ ನಿಲ್ಲಿಸಿ, ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿತ; ನಟಿ ರಂಜನಾ ನಾಚಿಯಾರ್ ಬಂಧನ
ಎಂಟಿಸಿ ಬಸ್ ನಿಲ್ಲಿಸಿ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದ ಮೇಲೆ ನಟಿ ಎಸ್. ರಂಜನಾ ನಾಚಿಯಾರ್ ಅವರನ್ನು ಚೆನ್ನೈ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರು ವಿದ್ಯಾರ್ಥಿಗಳನ್ನು ಥಳಿಸುವ ಮತ್ತು ಬಸ್ ಸಿಬ್ಬಂದಿಯನ್ನು ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಮಿಳುನಾಡು: ಪೋಷಕರ ವಿರೋಧ ನಡುವೆ ಮೂರು ದಿನದ ಹಿಂದೆ ಮದುವೆಯಾಗಿದ್ದ ನವವಿವಾಹಿತ ಜೋಡಿ ಬರ್ಬರ ಹತ್ಯೆ
ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು.

ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ: ರಾಜ್ಯಪಾಲ ರವಿ ವಿರುದ್ಧ 'ಸುಪ್ರೀಂ' ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ರಾಜ್ಯ ಸರ್ಕಾರ ಕಳುಹಿಸಿದ ವಿಧೇಯಕಗಳಿಗೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಆದೇಶ, ದೇವರನ್ನು ಪ್ರಾರ್ಥಿಸದೆ ಬೇರೆ ದಾರಿಯಿಲ್ಲ: ಡಿಕೆ.ಶಿವಕುಮಾರ್
ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ. ಇದನ್ನು ಸಂಬಂಧಪಟ್ಟವರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಕರ್ನಾಟಕಕ್ಕೆ ಮತ್ತೆ ಸಂಕಷ್ಟ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ CWRC ಸೂಚನೆ
ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಇಂದು ಸೂಚನೆ ನೀಡಿದೆ.

ತಮಿಳುನಾಡಿನಲ್ಲಿ ರೈಲಿಗೆ ಸಿಲುಕಿ ಕರ್ನಾಟಕದ ಮೂವರು ವಿಕಲಚೇತನ ಮಕ್ಕಳು ಸಾವು!
ಮಂಗಳವಾರ ನಗರದ ಹೊರವಲಯದ ಉರಪಕ್ಕಂ ಬಳಿ ಇಬ್ಬರು ಸಹೋದರರು ಸೇರಿದಂತೆ ಮೂವರು ವಿಕಲಚೇತನ ಮಕ್ಕಳು ಉಪನಗರ ರೈಲಿಗೆ ಸಿಲುಕಿ ಸಾವಿಗೀಡಾಗಿರುವ ದಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಬೆಂಕಿ ಅವಘಡ: 11 ಮಂದಿ ಸಾವು
ತಮಿಳುನಾಡಿನ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು ಮೃತಪಟ್ಟವರಲ್ಲಿ 9 ಮಹಿಳೆಯರು ಸೇರಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಂದ ಜಲಾಶಯಗಳು ಭರ್ತಿ; ಶೇ 58ರಷ್ಟು ನೀರಿನ ಮಟ್ಟ ಏರಿಕೆ
ಅಕ್ಟೋಬರ್ ಮಧ್ಯಭಾಗವಾಗಿದ್ದರೂ, ಇನ್ನೂ ಬಿರು ಬೇಸಿಗೆಯಂತೆ ಭಾಸವಾಗುತ್ತಿದೆ. ರಾಜ್ಯದ ಕೆಲವು ಭಾಗಗಳು ಬಿಸಿಲಿನ ಏರಿಕೆಯಿಂದ ತತ್ತರಿಸುತ್ತಿದ್ದರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ 1 ರಿಂದ 10 ರವರೆಗೆ ಉತ್ತಮ ಮಳೆಯಾಗಿದೆ. ಕಳೆದ 10 ದಿನಗಳಲ್ಲಿ ಜಲಾಶಯ ಶೇ 58 ರಷ್ಟು ಭರ್ತಿಯಾಗಿದೆ.

ತಮಿಳುನಾಡಿಗೆ 15 ದಿನ 3000 ಕ್ಯು.ನೀರು ಬಿಡಿ: ಮತ್ತೆ ಸಿಡಬ್ಲ್ಯೂಎಂಎ ಆದೇಶ, ಸುಪ್ರೀಂಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ!
ಅ.16ರಿಂದ 15 ದಿನಗಳ ಕಾಲ ತಮಿಳುನಾಡು ರಾಜ್ಯಕ್ಕೆ ನಿತ್ಯ 3000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶವನ್ನು ಶುಕ್ರವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ.

