Team India

ಉದ್ದೇಶಪೂರ್ವಕವಾಗಿ ಬ್ಯಾಟ್ಸ್‌ಮನ್ ತಡೆದ ಬುಮ್ರಾಗೆ ಐಸಿಸಿ ಛೀಮಾರಿ!
ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಛೀಮಾರಿ ಹಾಕಿದೆ. ಇಂಗ್ಲೆಂಡ್ ಬ್ಯಾಟ್ಸ್‌ಮನ್ ಓಲಿ ಪೋಪ್ ರನ್ ತೆಗೆದುಕೊಳ್ಳುವಾಗ ಉದ್ದೇಶಪೂರ್ವಕವಾಗಿ ಅವರನ್ನು ತಡೆಯಲು ಜಸ್ ಪ್ರೀತ್ ಬುಮ್ರಾ ಪ್ರಯತ್ನಿಸಿದರು.

ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ: ವಿವಾದಾಸ್ಪದ ತೀರ್ಪಿಗೆ ರವೀಂದ್ರ ಜಡೇಜಾ ಔಟ್, ಅಂಪೈರ್ ವಿರುದ್ಧ ನೆಟ್ಟಿಗರು ಗರಂ
ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಬ್ಯಾಟಿಂಗ್ ಮಾಡಿದ್ದು 87 ರನ್ ಗಳಿಸಿದ್ದಾಗ ಜೋ ರೂಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಔಟಾದರು. ಜಡೇಜಾ ಔಟಾದ ರೀತಿ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ.

ಮೊದಲ ಟೆಸ್ಟ್: ಸ್ವದೇಶದಲ್ಲಿ ಇಂಗ್ಲೆಂಡ್ ವಿರುದ್ಧ ಮಂಡಿಯೂರಿದ ಟೀಂ ಇಂಡಿಯಾ, 28 ರನ್‌ಗಳಿಂದ ಹೀನಾಯ ಸೋಲು!
ಭಾರತ ವಿರುದ್ಧದ ಹೈದರಾಬಾದ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಪ್ರವಾಸಿ ತಂಡ 28 ರನ್‌ಗಳಿಂದ ಗೆಲುವು ಸಾಧಿಸಿದೆ.

IND vs ENG 3ನೇ ದಿನದಾಟ ಅಂತ್ಯ: ಒಲಿ ಪೋಪ್ ಶತಕ; ಇಂಗ್ಲೆಂಡ್ 316/6, ಆಂಗ್ಲರಿಗೆ 126 ರನ್ ಮುನ್ನಡೆ!
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಅಂತ್ಯಗೊಂಡಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಒಲಿ ಪೋಪ್ ಶತಕದ ನೆರವಿನಿಂದ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 316 ರನ್ ಗಳಿಸಿದ್ದು 126 ರನ್ ಗಳ ಮುನ್ನಡೆ ಸಾಧಿಸಿದೆ.

ಅಂಡರ್-19 ವಿಶ್ವಕಪ್: ಬಾಂಗ್ಲಾವನ್ನು 84 ರನ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದ ಭಾರತ
ಎಡಗೈ ಆರಂಭಿಕ ಆದರ್ಶ್ ಸಿಂಗ್ ಮತ್ತು ನಾಯಕ ಉದಯ್ ಸಹರಾನ್ ಅರ್ಧಶತಕ ಹಾಗೂ ಸೌಮಿ ಪಾಂಡೆ ಮತ್ತು ಮುಶೀರ್ ಖಾನ್ ಅವರ ಮಾರಕ ಬೌಲಿಂಗ್ ನೆರವಿನಿಂದ ಭಾರತವು ಅಂಡರ್-19 ವಿಶ್ವಕಪ್ ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

2ನೇ ಟಿ20: ಮತ್ತೆ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್; ಆಫ್ಘಾನ್ ವಿರುದ್ಧ ಗೆದ್ದ ಭಾರತ, ಸರಣಿ ಕೈವಶ!
ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

1ನೇ ಟಿ20: ಶಿವಂ ದುಬೆ ಅಜೇಯ ಅರ್ಧಶತಕ; ಅಫ್ಘಾನಿಸ್ತಾನವನ್ನು 6 ವಿಕೆಟ್‌ಗಳಿಂದ ಮಣಿಸಿದ ಭಾರತ
ಅಫ್ಘಾನಿಸ್ತಾನ ವಿರುದ್ಧ ಆರಂಭವಾಗಿರುವ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡವನ್ನು 6 ವಿಕೆಟ್‌ಗಳಿಂದ ಸುಲಭವಾಗಿ ಸೋಲಿಸಿದ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ.

ಅಶಿಸ್ತಿನ ಕಾರಣ ತಂಡದಿಂದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಔಟ್? ರಾಹುಲ್ ದ್ರಾವಿಡ್ ಹೇಳಿದ್ದೇನು?
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಆಡದಿರುವ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ.

3ನೇ ಟಿ20 ಪಂದ್ಯ: ಭಾರತ ಮಹಿಳಾ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಸರಣಿ ಗೆದ್ದ ಆಸ್ಟ್ರೇಲಿಯಾ!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತವನ್ನು 7 ವಿಕೆಟ್ ಗಳಿಂದ ಮಣಿಸಿ ಸರಣಿ ಕೈವಶ ಮಾಡಿಕೊಂಡಿದೆ.

