• Tag results for telangana

ತೆಲಂಗಾಣ: ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಪತ್ತೆ

ಇಲ್ಲಿನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ನೋಡುವಾಗ ಪತ್ತೆಯಾಗಿತ್ತು.

published on : 9th August 2022

ತೆಲಂಗಾಣ: ಕ್ರೇನ್ ತಂತಿ ತುಂಡಾಗಿ ಐವರು ಕಾರ್ಮಿಕರ ಸಾವು, ಇಬ್ಬರಿಗೆ ಗಾಯ

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಏತ ನೀರಾವರಿ ಯೋಜನೆ ನಡೆಯುತ್ತಿದ್ದ ವೇಳೆ ಕ್ರೇನ್ ತಂತಿ ತುಂಡಾಗಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

published on : 29th July 2022

ತೆಲಂಗಾಣದಲ್ಲೂ ಮಂಕಿಪಾಕ್ಸ್ ಭೀತಿ; ಕುವೈತ್ ನಿಂದ ಆಗಮಿಸಿದ್ದ ವ್ಯಕ್ತಿಗೆ ಸೋಂಕು ಶಂಕೆ!

ಕೊರೋನಾ ಸೋಂಕು ಬೆನ್ನಲ್ಲೇ ಇಡೀ ವಿಶ್ವಕ್ಕೇ ಭೀತಿ ಹುಟ್ಟಿಸಿರುವ ಮಂಕಿಪಾಕ್ಸ್ ಸೋಂಕು ಇದೀಗ ತೆಲಂಗಾಣಕ್ಕೂ ಒಕ್ಕರಿಸಿರುವ ಶಂಕೆ ವ್ಯಕ್ತವಾಗಿದ್ದು, ಕುವೈತ್ ನಿಂದ ಆಗಮಿಸಿದ್ದ ವ್ಯಕ್ತಿಗೆ ಸೋಂಕಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.

published on : 24th July 2022

ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಅನಾರೋಗ್ಯ: ಸ್ಟೆತಸ್ಕೋಪ್‌ ಹಿಡಿದ ಚಿಕಿತ್ಸೆ ನೀಡಿದ ತೆಲಂಗಾಣ ರಾಜ್ಯಪಾಲೆ

ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ವೈದ್ಯೆಯಾಗಿ ವಿಮಾನದಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಿದರು. ದೆಹಲಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶ್ರೇಣಿಯ ಐಪಿಎಸ್ ಅಧಿಕಾರಿಯ ಜೀವವನ್ನು ಉಳಿಸಿದರು.

published on : 24th July 2022

ನೀತಿ ಆಯೋಗದ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೂರನೇ ಬಾರಿ ಅಗ್ರಸ್ಥಾನ

ನೀತಿ ಆಯೋಗ ಗುರುವಾರ ಪ್ರಕಟಿಸಿರುವ ಅಖಿಲ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿ-2021 ರಲ್ಲಿ ಕರ್ನಾಟಕ ಸತತ ಮೂರನೇ ಬಾರಿಗೆ ಅಗ್ರ ಸ್ಥಾನ ಪಡೆದಿದೆ. ತೆಲಂಗಾಣ ಮತ್ತು ಹರಿಯಾಣ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.

published on : 21st July 2022

ಕೇರಳ, ತೆಲಂಗಾಣದಲ್ಲಿ ಭಾರೀ ಮಳೆ; ಮಳೆ ಪೀಡಿತ ಛತ್ತೀಸ್‌ಗಢದಲ್ಲಿ ಬುಡಕಟ್ಟು ಮಹಿಳೆಯ ಡೆಲಿವರಿಗೆ ಗೃಹರಕ್ಷಕರು ನೆರವು!

ಮಳೆ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ತಂಡವು ನೆರವಾಗಿದ್ದು ಬುಡಕಟ್ಟು ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು ತಾಯಿ, ಮಗು ಸುರಕ್ಷಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 17th July 2022

ಆಂಧ್ರ ಸಿಎಂ ಜಗನ್ ಪಕ್ಷ ತೊರೆದ ತಾಯಿ ವಿಜಯಮ್ಮ; ಮಗಳ ಪಕ್ಷಕ್ಕೆ ಬೆಂಬಲ ಘೋಷಣೆ

ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್​ಆರ್​ ಕಾಂಗ್ರೆಸ್​​ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ತಾಯಿ ಹಾಗೂ ಅವಿಭಜಿತ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ ವೈಎಸ್ ರಾಜಶೇಖರ ರೆಡ್ಡಿ ಅವರ ಪತ್ನಿ ವೈ.ಎಸ್.ವಿಜಯಮ್ಮ ಘೋಷಿಸಿದ್ದಾರೆ.

published on : 8th July 2022

ಪ್ರತಿಯೊಬ್ಬ ಭಾರತೀಯನ ಜೀವನದಲ್ಲಿ ಧನಾತ್ಮಕ ಬದಲಾವಣೆ ತರಲು ಎನ್ ಡಿಎ ಸರ್ಕಾರ ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ

ಕೇಂದ್ರದ ಎನ್‌ಡಿಎ ಸರ್ಕಾರವು ಕಳೆದ ಎಂಟು ವರ್ಷಗಳಲ್ಲಿ ಪ್ರತಿಯೊಬ್ಬ ಭಾರತೀಯನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಮತ್ತು ಜನರ ಜೀವನವನ್ನು ಸುಲಭಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 4th July 2022

ಅಮೆರಿಕಾ: ತೆಲಂಗಾಣದ ಸಾಫ್ಟ್‌ವೇರ್ ಉದ್ಯೋಗಿಗೆ ಗುಂಡಿಕ್ಕಿ ಹತ್ಯೆ!

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಸಾಫ್ಟ್‌ವೇರ್ ಉದ್ಯೋಗಿ ಸಾಯಿ ಚರಣ್ ನಕ್ಕ (25) ಅವರನ್ನು ಭಾನುವಾರ ಸಂಜೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

published on : 22nd June 2022

ಅಗ್ನಿಪಥ ಯೋಜನೆ ವಿರುದ್ಧ ಹಲವು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ: ರೈಲುಗಳಿಗೆ ಬೆಂಕಿ, ಪೊಲೀಸ್ ಗುಂಡಿಗೆ ಸಿಕಂದರಾಬಾದ್ ನಲ್ಲಿ ಓರ್ವ ಸಾವು

ಕೇಂದ್ರ ಸರ್ಕಾರದ ಹೊಸ ನೇಮಕಾತಿ ಯೋಜನೆ 'ಅಗ್ನಿಪಥ' ವಿರುದ್ಧ ಪ್ರತಿಭಟನೆ ಇದೀಗ ಹೈದರಾಬಾದ್‌ಗೆ ವ್ಯಾಪಿಸಿದೆ, ಪ್ರತಿಭಟನಾಕಾರರು ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಕನಿಷ್ಠ ಏಳು ರೈಲುಗಳಿಗೆ ಬೆಂಕಿ ಹಚ್ಚಿ ಇಡೀ ರೈಲ್ವೆ ನಿಲ್ದಾಣದ ಆವರಣವನ್ನು ದೋಚಿದ್ದಾರೆ.

published on : 17th June 2022

ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ: ವಿಪಕ್ಷಗಳ ಸಭೆಯಿಂದ ದೂರ ಉಳಿದ ಕೆಸಿಆರ್, ಪ್ರಧಾನಿ ಹುದ್ದೆ ಮೇಲೆ ಕಣ್ಣು!

ರಾಷ್ಟ್ರೀಯ ಪಕ್ಷ ಕಟ್ಟುವ ಮೂಲಕ ಪ್ರಧಾನಿ ಹುದ್ದೆ ಮೇಲೆ ಕಣ್ಣು ಹಾಕಿರುವ ತೆಲಂಗಾಣ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹಾಗೂ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು, ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಭೆಗೆ ಗೈರಾಗಿದ್ದಾರೆ.

published on : 15th June 2022

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಶಾಸಕನ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ

ಹೈದರಾಬಾದ್'ನ ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಶಾಸಕನ ಪುತ್ರ ಸೇರಿ ಎಲ್ಲಾ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 8th June 2022

ಹೈದರಾಬಾದ್ ನಲ್ಲಿ ಮತ್ತೆ ನಾಲ್ಕು ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು ವರದಿ!

ಹೈದರಾಬಾದ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ರಾಷ್ಟ್ರದ ಸುದ್ದಿಯಾಗುತ್ತಲೇ ಇರುವಾಗಲೇ ನಗರದಲ್ಲಿ ಅಪ್ರಾಪ್ತರ ಮೇಲಿನ ನಾಲ್ಕು ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ.

published on : 7th June 2022

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ದುಬಾರಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ, ಪ್ರಭಾವಿಗಳ ಪುತ್ರರು ಸೇರಿ 5 ಮಂದಿ ವಿರುದ್ಧ ಪ್ರಕರಣ!

ಕಳೆದ ವಾರ ಹೈದರಾಬಾದ್‌ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೊಲೀಸರು ಪ್ರಭಾವಿಗಳ ಪುತ್ರರು ಸೇರಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

published on : 3rd June 2022

ಕೊಡಗು: ಕೋಟೆಅಬ್ಬಿ ಫಾಲ್ಸ್ ನಲ್ಲಿ ಮುಳುಗಿ ತೆಲಂಗಾಣದ ಮೂವರು ಜಲಸಮಾಧಿ!

ಕೊಡಗಿನ ಕೋಟೆಅಬ್ಬಿ ಜಲಪಾತದಲ್ಲಿ ಮುಳುಗಿ ತೆಲಂಗಾಣದ ಮೂವರು ನೀರುಪಾಲಾಗಿದ್ದಾರೆ.

published on : 29th May 2022
1 2 3 4 5 6 > 

ರಾಶಿ ಭವಿಷ್ಯ