• Tag results for terrorist

ತಪ್ಪಿದ ಮಹಾ ದುರಂತ: ಪಾಕ್‌ನಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿ 6 ಭಯೋತ್ಪಾದಕರ ಬಂಧನ!

ಪಾಕಿಸ್ತಾನದ ನಿಯಂತ್ರಿತ ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ. 

published on : 14th September 2021

ಕಾಶ್ಮೀರ: ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಸಾವು, ಉಗ್ರನೋರ್ವನನ್ನು ಹೊಡೆದುರುಳಿಸಿದ ಸೇನೆ

ಖನ್ಯಾರ್ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಅರ್ಷಿದ್ ಅಶ್ರಫ್ ಹುತಾತ್ಮರಾಗಿದ್ದಾರೆ. ಇದೇ ವೇಳೆ ಭಾರತೀಯ ಸೇನೆ ಮತ್ತು ಪೊಲೀಸರು ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ.

published on : 12th September 2021

ಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು: ಬೆಂಗಳೂರು ಮೂಲದ ಶಂಕಿತನ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಇಸಿಸ್ ಸೇರಿದಂತೆ ಇನ್ನಿತರ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಆರೋಪದಡಿ ಬಂಧಿತನಾಗಿದ್ದ ಶಂಕಿತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. 

published on : 4th September 2021

ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸಿದ ಶಸ್ತ್ರಸಜ್ಜಿತ ಉಗ್ರರು, ಯೋಧರ ಗುಂಡಿನ ದಾಳಿ ಬೆನ್ನಲ್ಲೇ ಪರಾರಿ!

ಆಫ್ಘಾನಿಸ್ತಾನ ತಾಲಿಬಾನ್ ತೆಕ್ಕೆಗೆ ಜಾರಿದ ಬೆನ್ನಲ್ಲೇ ಇತ್ತ ಇಂಡೋ-ಪಾಕ್ ಗಡಿಯಲ್ಲಿ ಉಗ್ರ ಚಟುವಟಿಕೆ ತೀವ್ರಗೊಂಡಿದ್ದು, ಇಂದು ಮುಂಜಾನೆ ಶಸ್ತ್ರಸಜ್ಜಿತ ಉಗ್ರರು ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದಾರೆ.

published on : 4th September 2021

ಕಾಶ್ಮೀರದಲ್ಲಿ ಬೃಹತ್ ವಿಧ್ವಂಸಕ ಕೃತ್ಯ ನಡೆಸಲು ಉಗ್ರರಿಂದ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಬೃಹತ್ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

published on : 31st August 2021

ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರು ಬರೆದು ಇಸಿಸ್-ಕೆ ಉಗ್ರರ ವಿರುದ್ಧ ಸೇಡು ತೀರಿಸಿಕೊಂಡ ಅಮೆರಿಕ ಸೇನೆ

ಇಸಿಸ್ ಕೆ ಉಗ್ರರ ವಿರುದ್ಧ ಡ್ರೋನ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದ್ದ ಅಮೆರಿಕ ಸೇನೆ, ದಾಳಿಗೂ ಮುನ್ನ ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರುಗಳನ್ನು ಬರೆದಿತ್ತು ಎಂದು ತಿಳಿದು ಬಂದಿದೆ.

published on : 30th August 2021

ಐಸಿಸ್-ಕೆ ಅಥವಾ ಐಸಿಸ್-ಖೋರಾಸನ್‌ ಉಗ್ರರು ಎಂದರೆ ಯಾರು?

ಕಾಬೂಲ್ ವಿಮಾನ ನಿಲ್ದಾಣದಲ್ಲಿ ರಕ್ತದೋಕುಳಿ ನಡೆಸಿದ ಐಸಿಸ್‌-ಕೆ ಸಂಘಟನೆ ಅಫ್ಘಾನಿಸ್ತಾನದಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಲು ನೋಡುತ್ತಿದೆ. ಅತ್ತ ಅಮೆರಿಕಾ, ಇತ್ತ ತಾಲಿಬಾನಿಗಳಿಗೆ ಕಠಿಣ ಎಚ್ಚರಿಕೆ ರವಾನಿಸಲು ಈ ಕೃತ್ಯ ಎಸಗಿದೆ.

published on : 28th August 2021

ಸೊಪೋರ್ ಎನ್ಕೌಂಟರ್: ಮೂವರು ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

published on : 24th August 2021

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಜಮ್ಮು-ಕಾಶ್ಮೀರ ಪೊಲೀಸರು!

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಲೂಚಿ ಬಾಗ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. 

published on : 23rd August 2021

ಅವಂತಿಪೋರಾದಲ್ಲಿ ಎನ್ಕೌಂಟರ್: 3 ಜೆಇಎಂ ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

published on : 21st August 2021

ಜಮ್ಮು-ಕಾಶ್ಮೀರ: ಪುಲ್ವಾಮ ಜಿಲ್ಲೆಯ ಆವಂತಿಪೊರದಲ್ಲಿ ಎನ್ ಕೌಂಟರ್, ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಲ್ಲಿಯವರೆಗೆ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.

published on : 20th August 2021

ಅಫ್ಘಾನಿಸ್ತಾನದಲ್ಲಿ ತಾಲೀಬಾನ್ ಪುನರುತ್ಥಾನದಿಂದ ಕಾಶ್ಮೀರದಲ್ಲಿ ಉಗ್ರರಿಗೆ ಉತ್ತೇಜನ: ತಜ್ಞರು

ಅಫ್ಘಾನಿಸ್ತಾನ ತಾಲೀಬಾನ್ ವಶವಾಗುತ್ತಿದ್ದಂತೆಯೇ ಕಾಶ್ಮೀರದಲ್ಲಿನ ಭದ್ರತೆ ಹಾಗೂ ಉಗ್ರರ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭದ್ರತಾ ತಜ್ಞರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

published on : 17th August 2021

ತಾಲಿಬಾನ್ ಉಗ್ರರಿಂದ ದೇಶ ವಶ: ಆತಂಕದಲ್ಲಿ ಧಾರವಾಡಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು; ತವರಿಗೆ ಮರಳಲು ಚಡಪಡಿಕೆ

ಆಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ್ನು ತಾಲಿಬಾನಿ ಉಗ್ರರು ವಶಪಡಿಸಿಕೊಂಡ ನಂತರ ಕಾಬುಲ್ ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಂಟಾದ ನಾಟಕೀಯ ಬೆಳವಣಿಗೆಗಳನ್ನು ಇಡೀ ವಿಶ್ವವೇ ನಿನ್ನೆ ನೋಡಿದೆ.

published on : 17th August 2021

ಹತನಾಗಿದ್ದ ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರನ ತಂದೆಯಿಂದ ಪುಲ್ವಾಮಾದಲ್ಲಿ ರಾಷ್ಟ್ರ ಧ್ವಜಾರೋಹಣ!

ಹಿಜ್ಬುಲ್​ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್​ ಬುರ್ಹಾನ್​​ ವಾನಿಯ ತಂದೆ ಮುಜಾಫರ್​ ವಾನಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪುಲ್ವಾಮಾದ ಟ್ರಾಲ್​ನಲ್ಲಿ ಧ್ವಜಾರೋಹಣ ಮಾಡಿದ್ದು, ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

published on : 15th August 2021

ಸ್ವಾತಂತ್ರ್ಯ ದಿನಾಚರಣೆ: ದಾಳಿಗೆ ಸಂಚು ರೂಪಿಸಿದ್ದ 4 ಜೆಇಎಂ ಉಗ್ರರ ಬಂಧನ, ತಪ್ಪಿದ ಭಾರೀ ವಿಧ್ವಂಸಕ ಕೃತ್ಯ

ಸ್ವಾತಂತ್ರ್ಯ ದಿನಾಚರಣೆ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಈ ಮೂಲಕ ದೊಡ್ಡ ವಿಧ್ವಂಸಕ ಕೃತ್ಯವೊಂದು ತಪ್ಪಿದಂತಾಗಿದೆ. 

published on : 14th August 2021
1 2 3 4 5 6 >