social_icon
  • Tag results for threat

'ಗಾಂಧಿ- ಗೋಡ್ಸೆ' ನಿರ್ದೇಶಕ ರಾಜ್‌ಕುಮಾರ್ ಸಂತೋಷಿಗೆ ಜೀವ ಬೆದರಿಕೆ, ಪೊಲೀಸರಿಗೆ ದೂರು

ಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ.

published on : 23rd January 2023

240 ಪ್ರಯಾಣಿಕರಿದ್ದ ಮಾಸ್ಕೋ-ಗೋವಾ ವಿಮಾನಕ್ಕೆ ಬಾಂಬ್ ಬೆದರಿಕೆ!

ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರ ಹೊತ್ತು ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

published on : 21st January 2023

ಶಾಸಕ ಹ್ಯಾರಿಸ್‌ ಪರವಾಗಿ ಕೆಎಎಸ್‌ ಅಧಿಕಾರಿಯಿಂದ ಬೆದರಿಕೆ ಕರೆ: ಎಎಪಿ ಮುಖಂಡ ಆರೋಪ

ಕೆಎಎಸ್‌ ಅಧಿಕಾರಿ ಎಲಿಶ ಆ್ಯಂಡ್ರಿವ್ಸ್‌ರವರು ಬೆದರಿಕೆ ಹಾಕಿದ್ದಾರೆಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ವಕ್ತಾರ ಕೆ.ಮಥಾಯಿ ಆರೋಪಿಸಿದ್ದು, ಈ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದಾರೆ.

published on : 20th January 2023

ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ ಪ್ರಕರಣ: ಹಿಂಡಲಗಾ ಜೈಲಿನ ಕೈದಿ ವಿಚಾರಣೆ- ಆರಗ ಜ್ಞಾನೇಂದ್ರ

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಕಚೇರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

published on : 20th January 2023

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಹಿಂಡಲಗಾ ಜೈಲಿನಲ್ಲಿ ಪತ್ತೆಯಾಗಿಲ್ಲ ಫೋನ್; ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು!

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ.

published on : 17th January 2023

ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಕರೆ; ಕೂಲಂಕಷ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ

ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರವು ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

published on : 16th January 2023

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ, ಬಿಗಿ ಭದ್ರತೆ 

ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶನಿವಾರ ಜೀವ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಗಳು ನಿತಿನ್ ಗಡ್ಕರಿ ಹತ್ಯೆ ಮಾಡುವುದಾಗಿ ಬೆಳಗ್ಗೆ ಎರಡು ಬಾರಿ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 14th January 2023

ತನಗೆ ಜೀವ ಬೆದರಿಕೆ ಇದೆ ಎಂದು ಗನ್ ಲೈಸೆನ್ಸ್ ಪಡೆದ ನೂಪುರ್ ಶರ್ಮಾ

ಕಳೆದ ವರ್ಷ ಟಿವಿ ಚರ್ಚೆಯ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಕಾರಣವಾಗಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಈಗ ತಮಗೆ ಜೀವ ಬೆದರಿಕೆ ಇದೆ ಎಂಬ ಕಾರಣ ನೀಡಿ ಗನ್...

published on : 12th January 2023

ವಿಮಾನಕ್ಕೆ ಬಾಂಬ್‌ ಬೆದರಿಕೆ: ಜಾಮ್‌ನಗರದ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ, ಎಲ್ಲೆಡೆ ತೀವ್ರ ತಪಾಸಣೆ

ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್‌ನ ಜಾಮ್‌ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ  ತುರ್ತು ಭೂಸ್ಪರ್ಶ ಮಾಡಲಾಗಿದೆ.

published on : 10th January 2023

ಮಾಸ್ಕೋದಿಂದ ಗೋವಾಕ್ಕೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ಗುಜರಾತ್‌ನಲ್ಲಿ ತುರ್ತು ಭೂಸ್ಪರ್ಶ

ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದ ಕಾರಣ ಗುಜರಾತ್‌ನ ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 

published on : 10th January 2023

1993 ರ ಮಾದರಿಯ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

ಮುಂಬೈ ಪೊಲೀಸರಿಗೆ ಕರೆ ಮಾಡಿ, 1993 ಮಾದರಿಯ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. 

published on : 8th January 2023

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ; ವಿದ್ಯಾರ್ಥಿಯೇ ಮೇಲ್ ಕಳುಹಿಸಿರುವ ಶಂಕೆ!

ಬಸವೇಶ್ವರ ನಗರದ ಖಾಸಗಿ ಶಾಲೆಯ ಆವರಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ ಎಂಬ ನೆಪವೊಡ್ಡಿ ಇ-ಮೇಲ್ ಸಂಚಲನಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಯೊಬ್ಬ ಮೇಲ್ ಕಳುಹಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

published on : 7th January 2023

ಬೆಂಗಳೂರು: ಬಸವೇಶ್ವರ ನಗರದ NPS ಶಾಲೆಯಲ್ಲಿ ಬಾಂಬ್ ಭೀತಿ, ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡು

ಬೆಂಗಳೂರಿನ(Bengaluru) ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.

published on : 6th January 2023

ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಪತ್ರ: ಓರ್ವನ ಬಂಧನ

ಭಟ್ಕಳ ಟೌನ್ ಪೊಲೀಸ್ ಠಾಣೆಯನ್ನು ಸ್ಫೋಟಿಸುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಭಟ್ಕಳ ಪೊಲೀಸರಿಗೆ ಒಪ್ಪಿಸಲಾಗುವ ಪ್ರಕ್ರಿಯೆ ನಡೆಯುತ್ತಿದೆ.

published on : 6th January 2023

ಆರ್‌ಎಸ್‌ಎಸ್ ಪ್ರಧಾನ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ, ಭದ್ರತೆ ಹೆಚ್ಚಳ

ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಪ್ರಧಾನ ಕಛೇರಿಯನ್ನು ಸ್ಫೋಟಿಸುವುದಾಗಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬರು ಫೋನ್ ಮಾಡಿ ಬೆದರಿಕೆ ಹಾಕಿದ್ದು,...

published on : 31st December 2022
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9