ಕ್ರೀಡೆವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಭಾರತಕ್ಕೆ 9ನೇ ಟೋಕಿಯೊ ಪ್ಯಾರಾಲಿಂಪಿಕ್ಸ್ ಕೋಟಾ, ನಿಶಾದ್ ಕುಮಾರ್ ಗೆ ಕಂಚು
ದುಬೈನಲ್ಲಿ ನಡೆಯುತ್ತಿರುವ ದುಬೈ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಹೈ ಜಂಪ್ ವಿಭಾಗದಲ್ಲಿ ಭಾರತದ ನಿಶಾದ್ ಕುಮಾರ್ ಅವರು ಎರಡು ಮೀಟರ್ ಜಿಗಿದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ 2020ರ ಟೋಕಿಯೊ ಪ್ಯಾರಾಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಸಫಲರಾಗಿದ್ದಾರೆ.