Vaccine

ಹೆಚ್ಚಿದ ಕೊರೋನಾ 3ನೇ ಅಲೆ ಆತಂಕ: ದೇಶದಲ್ಲಿಂದು 41,649 ಹೊಸ ಕೇಸ್ ಪತ್ತೆ, 593 ಮಂದಿ ಸಾವು
ಕೊರೋನಾ 3ನೇ ಅಲೆ ಆತಂಕದಲ್ಲಿರುವ ಭಾರತದಲ್ಲಿ ದಿನ ಕಳೆಯುತ್ತಿದ್ದಂತೆ ಕೋವಿಡ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,649 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 593 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮತ್ತೆ ಏರುತ್ತಿರುವ ಕೊರೋನಾ: ದೇಶದಲ್ಲಿಂದು 44,230 ಹೊಸ ಕೇಸ್ ಪತ್ತೆ, 555 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮತ್ತೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 44,230 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 555 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 48.78 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 48.78 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ದೇಶದಲ್ಲಿ 46 ಕೋಟಿ ಡೋಸ್ ದಾಟಿದ ಕೋವಿಡ್-19 ಲಸಿಕೆ ನೀಡಿಕೆ ಪ್ರಮಾಣ- ಕೇಂದ್ರ ಸರ್ಕಾರ
ದೇಶದಲ್ಲಿ ನೀಡಲಾಗಿರುವ ಕೋವಿಡ್-19 ಲಸಿಕೆ ಪ್ರಮಾಣ 46 ಕೋಟಿ ಡೋಸ್ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಸಂಜೆ 7 ಗಂಟೆಯ ತಾತ್ಕಾಲಿಕ ವರದಿಯ ಪ್ರಕಾರ, ಶುಕ್ರವಾರ 44,38,901 ಡೋಸ್ ಲಸಿಕೆ ನೀಡಲಾಗಿದೆ.

ಮೊದಲ ಡೋಸ್ ಕೋವಿಡ್-19 ಲಸಿಕೆ ಪಡೆದ ರಾಹುಲ್ ಗಾಂಧಿ
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಮೊದಲ ಡೋಸ್ ಕೋವಿಡ್-19 ಲಸಿಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಲಮಿತಿಯಲ್ಲಿ ಕೋವಿಡ್ ಲಸಿಕೆ ನೀಡುವ ಯೋಜನೆಯ ಕುರಿತು ವರದಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯದ ಎಲ್ಲ ಜನರಿಗೆ ಕಾಲಮಿತಿಯಲ್ಲಿ ಲಸಿಕೆ ನೀಡಲು ರೂಪಿಸಿರುವ ಯೋಜನೆ ಕುರಿತು ಮಾಹಿತಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 43,509 ಹೊಸ ಕೇಸ್ ಪತ್ತೆ, 640 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್'ನ ಏರಿಳಿಕೆಯ ಹಾದಿ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಗುರುವಾರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 640 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 29,689 ಹೊಸ ಕೇಸ್ ಪತ್ತೆ, 415 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್'ನ ಏರಿಳಿಕೆಯ ಹಾದಿ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 29,689 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 415 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಸುಮಾರು 45 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ
ದೇಶದಲ್ಲಿ ನೀಡಲಾಗಿರುವ ಒಟ್ಟು ಕೋವಿಡ್-19 ಲಸಿಕೆ ಪ್ರಮಾಣವು 45 ಕೋಟಿ ದಾಟಿದೆ. 18 ರಿಂದ 44 ವರ್ಷದೊಳಗಿನವರು 15.38 ಕೋಟಿಗೂ ಹೆಚ್ಚಿನ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

