Vaccine

ಕೋವಿಡ್ ನಿಂದ 10 ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುಎಸ್ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ
ಕೋವಿಡ್-19 ಸಾಂಕ್ರಾಮಿಕದಿಂದ ಭಾರತ ಮತ್ತು ಅಮೆರಿಕಾದಲ್ಲಿ 10 ಕುಟುಂಬ ಸದಸ್ಯರನ್ನು ಕಳೆದು ಕೊಂಡಿರುವುದಾಗಿ ಯುಎಸ್ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಹೇಳಿದ್ದು, ಮಾರಕ ವೈರಾಣುವಿನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಅಮೆರಿಕ ಪ್ರಜೆಗಳು ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕೋವಿಡ್-19: ದೇಶದಲ್ಲಿಂದು 41,806 ಹೊಸ ಕೇಸ್ ಪತ್ತೆ, 581 ಮಂದಿ ಸಾವು
ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,806 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 581 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 38,792 ಹೊಸ ಕೇಸ್ ಪತ್ತೆ; 624 ಮಂದಿ ಸಾವು
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,792 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 624 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಬರೀ ಒಣ ಪ್ರಚಾರ, ಲಸಿಕೆ ಮಾತ್ರ ಇಲ್ಲ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಟು ಟೀಕೆ
ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರ ಬರೀ ಒಣ ಪ್ರಚಾರ ಮಾಡುತ್ತಿದೆ, ಲಸಿಕೆ ಮಾತ್ರ ಸಿಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ದೇಶದ 50ಕ್ಕೂ ಹೆಚ್ಚು ನಗರ, ಪಟ್ಟಣ ಪ್ರದೇಶಗಳಲ್ಲಿ ಸ್ಪುಟ್ನಿಕ್-ವಿ ಲಸಿಕೆ ಬಳಕೆ ವಿಸ್ತರಣೆ: ಡಾ. ರೆಡ್ಡೀಸ್ ಲ್ಯಾಬೊರೇಟರಿ
ರಷ್ಯಾದ ಕೋವಿಡ್-19 ಲಸಿಕೆ ಸ್ಪುಟ್ನಿಕ್ ವಿಯನ್ನು ಭಾರತದಲ್ಲಿ ಮೇ 14ರಂದು ಬಳಕೆಗೆ ತಂದ ಹೈದರಾಬಾದ್ ಮೂಲದ ಡಾ.ರೆಡ್ಡೀಸ್ ಲ್ಯಾಬೊರೇಟರಿ ಲಿಮಿಟೆಡ್, ಪ್ರಾಯೋಗಿಕ ಯೋಜನೆಯನ್ನು 50ಕ್ಕೂ ಹೆಚ್ಚು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಿಸ್ತರಿಸಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 38.86 ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 38.86 ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿತ: ದೇಶದಲ್ಲಿಂದು 37,154 ಹೊಸ ಕೇಸ್ ಪತ್ತೆ, 724 ಮಂದಿ ಸಾವು
ಭಾರತದಲ್ಲಿ ಕೊರೋನಾ ಏರಿಳಿಯುತ್ತಿರುವ ಬೆಳವಣಿಗೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 37,154 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 724 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 41,506 ಹೊಸ ಕೇಸ್ ಪತ್ತೆ, 3.08 ಕೋಟಿಗೆ ಸೋಂಕಿತರ ಸಂಖ್ಯೆ ಏರಿಕೆ
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಏರಿಳಿಯುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,506 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 895 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 45,254 ಹೊಸ ಕೇಸ್ ಪತ್ತೆ; 1,206 ಮಂದಿ ಬಲಿ
ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಏರಿಳಿಯುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 45,254 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,206 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

