Vaccine

ಗಾರ್ಮೆಂಟ್ಸ್ ಫ್ಯಾಕ್ಟರಿಗಳನ್ನು ಸಹಜ ಸ್ಥಿತಿಗೆ ತರಲು ಲಸಿಕೆಯೊಂದೇ ನಮ್ಮ ಬಳಿಯಿರುವ ಸಾಧನ: ಮಾಲೀಕರು
ರಾಜ್ಯದಲ್ಲಿ ಅನ್'ಲಾಕ್ 3.0 ಸೋಮವಾರದಿಂದ ಜಾರಿಯಾಗಿದ್ದು, ಲಾಕ್ಡೌನ್ ನಿಯಮಗಳು ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಮಹಿಳೆಯರು ಗಾರ್ಮೆಂಟ್ಸ್ ಕೆಲಸಕ್ಕೆ ಮರಳುತ್ತಿದ್ದಾರೆ. ಈ ನಡುವೆ ಗಾರ್ಮೆಂಟ್ಸ್ ಫ್ಯಾಕ್ಟರಿಗಳನ್ನು ಸಹಜ ಸ್ಥಿತಿಗೆ ತರಲು ಲಸಿಕೆಯೊಂದೇ ನಮ್ಮ ಬಳಿಯಿರುವ ಸಾಧನ ಎಂದು ಗಾರ್ಮೆಂಟ್ಸ್ ಕಾರ್ಖಾನೆಗಳ ಮಾಲೀಕರು ಹೇಳಿದ್ದಾರೆ.

ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ: ಸಚಿವ ಮಾಧುಸ್ವಾಮಿ
ಕೋವಿಡ್–19 ಲಸಿಕೆ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿಯನರು ಭಾನುವಾರ ಹೇಳಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 43,071 ಹೊಸ ಕೇಸ್ ಪತ್ತೆ, 955 ಮಂದಿ ಸಾವು
ಭಾರತದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,071 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 955 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೋನಾ 3ನೇ ಅಲೆ ಆರಂಭಕ್ಕೂ ಮುನ್ನ ಲಸಿಕೆ ಪಡೆದುಕೊಳ್ಳಿ: ಗರ್ಭಿಣಿ ಮಹಿಳೆಯರಿಗೆ ವೈದ್ಯರ ಸಲಹೆ
ರಾಷ್ಟ್ರೀಯ ಸಲಹಾ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಂಡಿರುವ ಕೇಂದ್ರ ಆರೋಗ್ಯ ಸಚಿವಾಲಯ ಗರ್ಭಿಣಿಯರಿಗೆ ಲಸಿಗೆ ನೀಡಲು ಒಪ್ಪಿಗೆ ನೀಡಿದ್ದು, ಇದರ ಬೆನ್ನಲ್ಲೇ ಕೊರೋನಾ 3ನೇ ಅಲೆ ಆರಂಭಕ್ಕೂ ಮುನ್ನ ಲಸಿಕೆ ಪಡೆದುಕೊಳ್ಳುವಂತೆ ಗರ್ಭಿಣಿ ಮಹಿಳೆಯರಿಗೆ ತಜ್ಞರು ಸಲಹೆಗಳನ್ನು ನೀಡುತ್ತಿದ್ದಾರೆ.

ಕೋವಿಡ್-19: ದೇಶದಲ್ಲಿಂದು 44,111 ಹೊಸ ಕೇಸ್ ಪತ್ತೆ; 738 ಮಂದಿ ಸಾವು
ಭಾರತದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 44,111 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 738 ಮಂದಿ ಕೋವಿಡ್'ಗೆ ಬಲಿಯಾಗಿದ್ದಾರೆ.

ಲಸಿಕೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿಲ್ಲ, ವಾಡಿಕೆಗಿಂತ 4.5 ಲಕ್ಷ ಡೋಸ್ ಹೆಚ್ಚು ಬಂದಿದೆ: ಸಚಿವ ಡಾ. ಕೆ.ಸುಧಾಕರ್
ರಾಜ್ಯಕ್ಕೆ ಕೇಂದ್ರದಿಂದ ಕೋವಿಶೀಲ್ಡ್ ಲಸಿಕೆ ಡೋಸ್ ಏಳೂವರೆ ಲಕ್ಷ ಬಂದಿದೆ. ಬಾಕಿ ಇರುವ ಲಸಿಕೆಯನ್ನು ಕಳುಹಿಸಿಕೊಡುವುದಾಗಿ ಕೇಂದ್ರ ಸರ್ಕಾರದಿಂದ ಮಾಹಿತಿ ಬಂದಿದೆ. ರಾಜ್ಯಕ್ಕೆ ಹಂಚಿಕೆ ಮಾಡಬೇಕಾಗಿದ್ದ ವಾಡಿಕೆಯ ಡೋಸ್ ಗಿಂತ ನಾಲ್ಕೂವರೆ ಲಕ್ಷ ಹೆಚ್ಚು ಲಸಿಕೆ ಬಂದಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

ಭೌತಿಕ ತರಗತಿಗಳ ಆರಂಭಕ್ಕೂ ಮುನ್ನ ಎಲ್ಲಾ ವಿದ್ಯಾರ್ಥಿಗಳು ಲಸಿಕೆ ಪಡೆದಿರಲಿ: ಎಲ್ಲಾ ವಿವಿಗಳಿಗೆ ಸಚಿವ ಅಶ್ವತ್ಥ್ ನಾರಾಯಣ್ ಸೂಚನೆ
ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಾಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಜುಲೈ 7ರೊಳಗೆ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ಅವರು, ರಾಜ್ಯ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 46,617 ಹೊಸ ಕೇಸ್ ಪತ್ತೆ, 853 ಮಂದಿ ಸಾವು
ಭಾರತದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 46,617 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 853 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಶಾಸಕರ ಕಚೇರಿಗೆ ಹೋಗಿ ಕೋವಿಡ್ ಲಸಿಕೆ ಪಡೆಯಲು ಹೇಳುತ್ತಿದ್ದಾರೆ: ರಾಜರಾಜೇಶ್ವರಿ ನಗರ ನಿವಾಸಿಗಳ ಗಂಭೀರ ಆರೋಪ
ಕೋವಿಡ್ ಲಸಿಕೆ ಪಡೆಯಲು ಇಚ್ಛಿಸುವವರು ಸ್ಥಳೀಯ ಶಾಸಕರ ಕಚೇರಿಗೆ ತೆರಳಿ ವೋಟರ್ ಐಡಿ ನೀಡಿ ಲಸಿಕೆ ಪಡೆಯುವಂತೆ ಆರೋಗ್ಯ ಸಿಬ್ಬಂದಿಗಳು ಹೇಳುತ್ತಿದ್ದಾರೆಂದು ರಾಜರಾಜೇಶ್ವರಿ ನಗರ ನಿವಾಸಿಗಳು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

