Vaccine

ಕೋವಿಡ್-19: ಭಾರತದಲ್ಲಿಂದು 45,951 ಹೊಸ ಕೇಸ್ ಪತ್ತೆ, 817 ಮಂದಿ ಸಾವು
ಭಾರತದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 45,951 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 817 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳೂರು: ಲಸಿಕೆ ಕೊಡಿಸುವುದಾಗಿ ರಾತ್ರೋ ರಾತ್ರಿ 50 ಮಹಿಳೆಯರ ಸಾಗಾಟ, ಪ್ರಕರಣ ದಾಖಲು
ಕೊರೋನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

60 ವರ್ಷಕ್ಕೂ ಮೇಲ್ಪಟ್ಟ ವಯಸ್ಸಿನ ಶೇ.49 ರಷ್ಟು ಜನರಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಪೂರ್ಣ: ಕೇಂದ್ರ ಸರ್ಕಾರ
60 ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸಿನ ಜನಸಂಖ್ಯೆಯ ಶೇಕಡಾ 49 ರಷ್ಟು ಜನರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. 18ರಿಂದ 44 ವರ್ಷದೊಳಗೆ 59.7 ಕೋಟಿ ಜನರು ಅಂದರೆ ಶೇಕಡಾ 15 ರಷ್ಟು ಜನರು ಮೊದಲ ಡೋಸ್ ಪಡೆದುಕೊಂಡಿದ್ದಾರೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಲಸಿಕೆ ಅಭಿಯಾನ ಮತ್ತಷ್ಟು ಚುರುಕು: ವಿಶೇಷ ಶಿಬಿರ ಆರಂಭಕ್ಕೆ ಬಿಬಿಎಂಪಿ ನಿರ್ಧಾರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಇದಕ್ಕಾಗಿ ವಿಶೇಷ ಶಿಬಿರ ಆರಂಭಿಸಲು ಮುಂದಾಗಿದ್ದಾರೆ.

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆ: ದೇಶದಲ್ಲಿಂದು 37,566 ಹೊಸ ಕೇಸ್ ಪತ್ತೆ, 907 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 37,566 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 907 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಜಾನುವಾರುಗಳಲ್ಲಿ ಕಾಲುಬಾಯಿ ರೋಗ ಹೆಚ್ಚಳ: ಕೊರೋನಾ ನಡುವೆ ರಾಜ್ಯದಲ್ಲಿ ಮತ್ತೊಂದು ತಲೆನೋವು!
ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಆರ್ಭಟದಿಂದ ಸುಧಾರಿಸಿಕೊಳ್ಳುತ್ತಿರುವ ನಡುವಲ್ಲೇ ರಾಜ್ಯದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ ರೋಗ ಹೆಚ್ಚಾಗುತ್ತಿದ್ದು, ಇದು ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಡೆಲ್ಟಾ ಆತಂಕ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ 2 ಡೋಸ್ ಕೋವಿಡ್ ಲಸಿಕೆ ಕಡ್ಡಾಯ!
ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತಿದ್ದರೂ, ಮತ್ತೊಂದು ಕಡೆ ರೂಪಾಂತರಿ ಸೋಂಕಿನ ಕಾಟ ಶುರುವಾಗಿದೆ. ಹೀಗಾಗಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.15 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 1.15 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ದೇಶದಲ್ಲಿಂದು 46,148 ಹೊಸ ಕೇಸ್ ಪತ್ತೆ; 979 ಮಂದಿ ಸಾವು
ಭಾರತದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 46,148 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 979 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

