Vaccine

'ಮರಳಿ ಕಾಲೇಜಿಗೆ' ಘೋಷವಾಕ್ಯದಡಿ ಕಾಲೇಜುಗಳ ಆರಂಭಕ್ಕೆ ಚಿಂತನೆ: ಡಿಸಿಎಂ ಅಶ್ವಥ ನಾರಾಯಣ
ಮರಳಿ ಕಾಲೇಜಿಗೆ ಎನ್ನುವ ಘೋಷ ವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಹೀಗಾಗಿ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ತೀರ್ಮಾನಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ; ದೇಶದಲ್ಲಿಂದು 54,069 ಹೊಸ ಕೇಸ್ ಪತ್ತೆ; 1,321 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿ ಗುರುವಾರ 54,069 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ ಗಡಿ ದಾಟಿ 3,00,82,778ಕ್ಕೆ ತಲುಪಿದೆ.

ಲಸಿಕೆ ಹಾಕಿಸಿಕೊಳ್ಳದಿದ್ದಲ್ಲಿ ವೇತನವೂ ಇಲ್ಲ: ಸರ್ಕಾರಿ ನೌಕರರಿಗೆ ಉಜ್ಜನಿ ಜಿಲ್ಲಾಧಿಕಾರಿ ಕ್ರಮ!
ಮೂರನೇ ಅಲೆಗೂ ಮುನ್ನ ದೇಶಾದ್ಯಂತ ಲಸಿಕೆ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕೋವಿಡ್ ಲಸಿಕೆ ಅಭಿಯಾನ: ರಾಜ್ಯದಲ್ಲಿ ಮೈಸೂರು ಜಿಲ್ಲೆಗೆ ಎರಡನೇ ಸ್ಥಾನ, ಬೆಂಗಳೂರು ಮೊದಲು!
ರಾಜ್ಯದಲ್ಲಿ ಅತಿ ಹೆಚ್ಚು ಕೋವಿಡ್-19 ಪಾಸಿಟಿವ್ ದರ ಹೊಂದಿರುವ ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ ಮಧ್ಯೆ ಸಣ್ಣದೊಂದು ಆಶಾರೇಖೆ ಮೂಡಿದೆ. ಲಸಿಕೆ ನೀಡಿಕೆಯಲ್ಲಿ ರಾಜ್ಯದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ಮೈಸೂರು ಜಿಲ್ಲೆ ಎರಡನೇ ಸ್ಥಾನದಲ್ಲಿದೆ.

ಕೋವಿಡ್-19: ಭಾರತದಲ್ಲಿಂದು 50,848 ಹೊಸ ಕೇಸ್ ಪತ್ತೆ; 1,358 ಮಂದಿ ಸಾವು
ದೇಶದಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 50,848 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,358 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ.

ಯಾದಗಿರಿ: ಕೋವಿಡ್ ಲಸಿಕೆ ಭೀತಿಯಿಂದ ಮನೆಗೆ ಬೀಗ ಹಾಕಿ ಕಾಲ್ಕಿತ್ತ ಗ್ರಾಮಸ್ಥರು!
ಕೋವಿಡ್-19 ಲಸಿಕೆ ಹಾಕುವ ಸಲುವಾಗಿ ಊರಿಗೆ ಬಂದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಕಂಡ ಗ್ರಾಮಸ್ಥರು ಮನೆಗಳಿಗೆ ಬೀಗ ಹಾಕಿ ಕಾಲ್ಕಿತ್ತಿರುವ ಘಟನೆಯೊಂದು ಯಾದಗಿರಿಯ ಕೆಂಚಗಾರಹಳ್ಳಿಯಲ್ಲಿ ನಡೆದಿದೆ.

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ: ದೇಶದಲ್ಲಿಂದು 42,640 ಹೊಸ ಕೇಸ್ ಪತ್ತೆ; 1,167 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,640 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 91 ದಿನದಲ್ಲೇ ದೃಢಪಟ್ಟ ಕನಿಷ್ಠ ಸಂಖ್ಯೆಯಾಗಿದೆ. ಇನ್ನು ಇದೇ ಅವಧಿಯಲ್ಲಿ 1,167 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ.

ಲಸಿಕೆ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ: ಡಾ. ಕೆ.ಸುಧಾಕರ್
ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ನಮ್ಮ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡುವ ಗುರಿ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

