ರಾಜ್ಯಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಹೆಸರಿಡಲು ಸರ್ಕಾರ ಚಿಂತನೆ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸಚಿವ ಎಂಬಿ ಪಾಟೀಲ್ ಬುಧವಾರ ವಿಧಾನಸಭೆಗೆ ತಿಳಿಸಿದರು.