• Tag results for visit

ಗಡಿ ವಿವಾದ: ಕನ್ನಡಿಗರ ಹೋರಾಟಕ್ಕೆ ಮಣಿದ ಮಹಾರಾಷ್ಟ್ರ ಸಚಿವರು? ಬೆಳಗಾವಿ ಭೇಟಿ ರದ್ದು; ಇಂದು ʻಕರವೇ ನಡಿಗೆ ಬೆಳಗಾವಿ ಕಡೆಗೆ’

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್​ ಅಂಗಳದಲ್ಲಿರುವಾಗಲೇ ಬೆಳಗಾವಿಗೆ ಭೇಟಿ ನೀಡಿಯೇ ತೀರುತ್ತೇವೆ, ನಮ್ಮನ್ನು ಯಾರೂ ತಡೆಯಲಾಗದು ಎಂದು ಹೇಳಿದ್ದೆ ಮಹಾರಾಷ್ಟ್ರ ಸಚಿವರು, ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದಂತಿದ್ದು, ಬೆಳಗಾವಿ ಭೇಟಿಯನ್ನು ರದ್ದುಗೊಳಿಸಿದ್ದಾರೆ.

published on : 6th December 2022

ಕಾನೂನು ಉಲ್ಲಂಘನೆ ಮಾಡಿದರೆ ಮಹಾರಾಷ್ಟ್ರ ಸಚಿವರ ಮೇಲೂ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

published on : 5th December 2022

ಡಿ.6ರಂದು ಬೆಳಗಾವಿಗೆ ಹೋಗಿಯೇ ಹೋಗುತ್ತೇನೆ, ನನಗೆ ಸಿಎಂ ಬೊಮ್ಮಾಯಿ ಪತ್ರ ಬಂದಿಲ್ಲ: ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್

ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಗಡಿ ವಿವಾದ ಮುಂದುವರಿಯುತ್ತಿರುವುದರ ಮಧ್ಯೆ ನಾಡಿದ್ದು ಡಿಸೆಂಬರ್ 6ರಂದು ಬೆಳಗಾವಿಗೆ ಹೋಗಿಯೇ ತೀರುತ್ತೇನೆ ಎಂದು ಮಹಾರಾಷ್ಟ್ರದ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

published on : 3rd December 2022

ಬೆಳಗಾವಿಯಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ: ನಾಳೆ ನಿಗದಿಯಾಗಿದ್ದ ಮಹಾರಾಷ್ಟ್ರ ಸಚಿವರುಗಳು ಭೇಟಿ ಡಿ.6ಕ್ಕೆ ಮುಂದೂಡಿಕೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರವಾದ ನಂತರ ಅನೇಕ ಅಹಿತಕರ ಘಟನೆಗಳು ಬೆಳಗಾವಿಯಲ್ಲಿ ನಡೆದಿವೆ. ಮೊನ್ನೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಮೊನ್ನೆ ಸಾಂಸ್ಕೃತಿಕ ಕಾರ್ಯಕ್ರಮ ವೇಳೆ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಥಳಿಸಿದ್ದರಿಂದ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ.

published on : 2nd December 2022

ಅಯೋಧ್ಯಗೆ ಯೋಗಿ ಆದಿತ್ಯನಾಥ್ ಭೇಟಿ, ರಾಮ ಮಂದಿರ ಕಾಮಗಾರಿ ಪರಿಶೀಲನೆ 

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಅಯೋಧ್ಯೆಗೆ ಭೇಟಿ ನೀಡಿದ್ದು, ಅಲ್ಲಿನ ಪ್ರಸಿದ್ಧ ಹನುಮಂಗರಹಿ ದೇವಾಲಯ ಮತ್ತು ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

published on : 27th November 2022

ಮಂಗಳೂರಿನಲ್ಲಿ ಆಟೋ ಸ್ಫೋಟ: ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ, ಪರಿಶೀಲನೆ

ಶನಿವಾರ ಸಂಜೆ ಆಟೋರಿಕ್ಷಾ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದರು.

published on : 20th November 2022

ಮೋದಿ ಬೆಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ? ಪ್ರಿಯತಮೆಯ ಪತಿಯಿಂದ ತಪ್ಪಿಸಿಕೊಳ್ಳಲು ಏರ್ ಪೋರ್ಟ್ ಒಳಗೆ ನುಗ್ಗಿದ್ದ ಆಗಂತುಕ!

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುವ ಎರಡು ದಿನಗಳ ಮೊದಲು ನವೆಂಬರ್ 9 ರಂದು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯವಾಗಿದ್ದು ಕೇಂದ್ರ ಭದ್ರತಾ ಸಂಸ್ಥೆಗಳು ಮತ್ತು ಪೊಲೀಸರನ್ನು ತಲೆತಿರುಗುವಂತೆ ಮಾಡಿತು.

published on : 17th November 2022

ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿ: ಮೂವರು ಧಾರ್ಮಿಕ ಮುಖಂಡರುಗಳ ಭೇಟಿ, ಲೆಕ್ಕಚಾರಗಳೇನು?

ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಬೆಂಗಳೂರು ಭೇಟಿ ಸಹಜವಾಗಿ ಸಾಕಷ್ಟು ಕುತೂಹಲ, ಬಿಜೆಪಿ ಪಾಳಯದಲ್ಲಿ ಉತ್ಸಾಹ ತುಂಬಿದೆ. ಪ್ರಧಾನಿಯವರ ಈ ಭೇಟಿ ಕೇವಲ ಅಭಿವೃದ್ಧಿ ಅಜೆಂಡಾ ಮಾತ್ರವಲ್ಲ, ಪ್ರಮುಖ ಮೂರು ಧಾರ್ಮಿಕ ಮುಖಂಡರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ.

published on : 11th November 2022

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ಯಾವ ಸಮಯಕ್ಕೆ ಏನು ಕಾರ್ಯಕ್ರಮ, ಎಲ್ಲೆಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಮಾಹಿತಿ...

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಮೂರು ಅಧಿಕೃತ ಕಾರ್ಯಕ್ರಮಗಳು ನಿಗದಿಯಾಗಿವೆ.

published on : 10th November 2022

ನ.11ಕ್ಕೆ ಪ್ರಧಾನಿ ಮೋದಿ ಆಗಮನ: ಸಿಎಂ ನೇತೃತ್ವದಲ್ಲಿ ಪರಿಶೀಲನಾ ಸಭೆ, ಮಣ್ಣು ಸಂಗ್ರಹ ಅಭಿಯಾನಕ್ಕೆ ಮಂಗಳೂರಿನಲ್ಲಿ ಚಾಲನೆ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಮಣ್ಣು ಸಂಗ್ರಹಿಸುವ 'ಬನ್ನಿ ನಾಡ ಕಟ್ಟೋಣ' ಅಭಿಯಾನವನ್ನು ಸರ್ಕಾರ ಆರಂಭಿಸಿದೆ. 

published on : 27th October 2022

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ಇಂದಿನಿಂದ ಮೂರು ದಿನ ಭಾರತ ಭೇಟಿ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಂಗಳವಾರದಿಂದ ಮೂರು ದಿನ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಅವಧಿಯಲ್ಲಿ ಭಾರತೀಯ ಸಂವಾದಕರೊಂದಿಗೆ ಮಾತುಕತೆ ನಡೆಸುವುದರಲ್ಲದೇ, ಮುಂಬೈನ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ನಲ್ಲಿ 26/11 ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಸಲ್ಲಿಸಲಿದ್ದಾರೆ.

published on : 18th October 2022

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಶೀಘ್ರವೇ ದೆಹಲಿಗೆ: ಸಿಎಂ ಬಸವರಾಜ ಬೊಮ್ಮಾಯಿ

ಜನಸಂಕಲ್ಪ ಯಾತ್ರೆಯ ನಡುವೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

published on : 16th October 2022

ವಿಶ್ವ ಪ್ರಸಿದ್ಧ ದಸರಾ ವೇಳೆ ಮೈಸೂರು ಅರಮನೆಗೆ 2 ಲಕ್ಷ ಪ್ರವಾಸಿಗರ ಭೇಟಿ!

ಇತ್ತೀಚೆಗೆ ನಡೆದ 10 ದಿನಗಳ ದಸರಾ ಮಹೋತ್ಸವದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಮೈಸೂರಿನ ಪ್ರಸಿದ್ಧ ಅಂಬಾ ವಿಲಾಸ ಅರಮನೆಗೆ ಭೇಟಿ ನೀಡಿದ್ದರು.

published on : 11th October 2022

ಸಚಿವ ಸಂಪುಟ ವಿಸ್ತರಣೆ: ಸದ್ಯದಲ್ಲಿಯೇ ಸಿಎಂ ಬೊಮ್ಮಾಯಿ ದೆಹಲಿಗೆ

ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರ ಒಪ್ಪಿಗೆ ಪಡೆಯಲು ಶೀಘ್ರವೇ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಅವರು ವಿಜಯಪುರದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲ ಸಂಗ್ರಹಾಗಾರದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ಮಾತನಾಡಿದರು.

published on : 1st October 2022

ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯ ಪ್ರವಾಸ, ನಾಳೆ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ 

ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ದ್ರೌಪದಿ ಮುರ್ಮು ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಅಧಿಕೃತ ಹೇಳಿಕೆಯಲ್ಲಿ ಭಾನುವಾರ ತಿಳಿಸಿದೆ.

published on : 25th September 2022
1 2 3 4 5 6 > 

ರಾಶಿ ಭವಿಷ್ಯ