ರಾಜ್ಯಕೊರೋನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ?: ಎಂ.ಬಿ. ಪಾಟೀಲ್ ಪ್ರಶ್ನೆ
ದೇಶದಲ್ಲಿ ಜನರು ಸಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರಾಜಪಥ ಅಭಿವೃದ್ಧಿ, ಪ್ರಧಾನ ಮಂತ್ರಿಗಳ ನಿವಾಸ, ಉಪರಾಷ್ಟ್ರಪತಿಗಳ ನಿವಾಸದ ಪ್ರಗತಿಗೆ ಸಾವಿರಾರು ಕೋಟಿ ವ್ಯಯಿಸುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರು ಪ್ರಶ್ನಿಸಿದ್ದಾರೆ.