ರಾಜ್ಯಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವು ಔಷಧಿಗಳ ಕೊರತೆ ಇರುವುದು ನಿಜ: ಸಚಿವ ದಿನೇಶ್ ಗುಂಡೂರಾವ್
ಸ್ಥಳೀಯ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ವಿತರಣೆ ಕುರಿತು ಈಗಾಗಲೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಟೆಂಡರ್ ಪ್ರಕ್ರಿಯೆಯಿಂದಾಗಿ ಸರಬರಾಜು ಆಗದ ಔಷಧಗಳನ್ನು ಸ್ಥಳೀಯವಾಗಿಯೇ ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.