ಕಟ್ಟಡ ಕುಸಿತ

ನ್ಯೂಯಾರ್ಕ್: ಅಪಾರ್ಟ್ ಮೆಂಟ್ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ ಪುಟ್ಟ ಮಗು; ಮುಂದೇನಾಯ್ತು? Video
'ನ್ಯೂಯಾರ್ಕ್ ಪೋಸ್ಟ್' ವರದಿಯ ಪ್ರಕಾರ, ಆರು ಸೆಕೆಂಡುಗಳ ಈ ವಿಡಿಯೋವನ್ನು ಮೂರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಆಂಡ್ರಸನ್ ವೆಲೆಜ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಸೆರೆಹಿಡಿಯಲಾಗಿದೆ.

ದೆಹಲಿಯಲ್ಲಿ ಭೀಕರ ದುರಂತ: ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, 15ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ! Video
ಕನಿಷ್ಠ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. ಹಲವರು ಗಾಯಗೊಂಡಿದ್ದಾರೆ. ಬೆಳಗ್ಗೆ 9.50ಕ್ಕೆ ನಮಗೆ ಕರೆ ಬಂದಿತ್ತು. ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಎಂಸಿ, ದೆಹಲಿ ಪೊಲೀಸರು, ದೆಹಲಿ ಅಗ್ನಿಶಾಮಕ ದಳ ಹಾಗೂ ಎಂಸಿಡಿ ತಂಡಗಳು ಭಾಗಿಯಾಗಿವೆ.

ದೆಹಲಿಯಲ್ಲಿ ಮತ್ತೊಂದು ಕಟ್ಟಡ ಬೀಳುವ ಭೀತಿ: ಏಕಾಏಕಿ ವಾಲಿದ ನಾಲ್ಕಂತಸ್ತಿನ ಕಟ್ಟಡ; ನೆಲಸಮಗೊಳಿಸಲು MCD ಸೂಚನೆ
ದೆಹಲಿಯ ಗಾಂಧಿನಗರ ಪ್ರದೇಶದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ಭಾನುವಾರ ಏಕಾಏಕಿ ವಾಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡವನ್ನು ಖಾಲಿ ಮಾಡಿಸಲಾಗಿದೆ.

ದೆಹಲಿ ಹಾಸ್ಟೆಲ್ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ; Video
ಕಟ್ಟಡದ ನೆಲಮಾಳಿಗೆಯಲ್ಲೂ ದುರಸ್ತಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಯಿತಾದರೂ, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ
75 ಹಾಸಿಗೆಗಳ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡವು ಮಧ್ಯಾಹ್ನ 1:30 ರ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಭಿವಂಡಿಯಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ; Video
ಗುರುವಾರ ರಾತ್ರಿ 11.30 ರ ಸುಮಾರಿಗೆ ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಕುಸಿದು ಬಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಣಾ ತಂಡಗಳು ಆರು ಜನರ ಶವಗಳನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ.

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!
ವಿಶೇಷ ಯಂತ್ರಗಳು ಸೇರಿದಂತೆ ಸುಮಾರು 15 ಅಗೆಯುವ ಯಂತ್ರಗಳು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್‌ಡಿಆರ್‌ಎಫ್) ಮತ್ತು ಸೇನೆ ಸೇರಿದಂತೆ ಇತರ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು; ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ!
ರೋಹಿಣಿ ಸೆಕ್ಟರ್ 16 ರ ಜಿ -4 ಪಾಕೆಟ್‌ನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಹಠಾತ್ತನೆ ಕುಸಿದು ಬಿದ್ದಿದೆ. ಅಪಘಾತದ ಸಮಯದಲ್ಲಿ ಹಲವಾರು ಕಾರ್ಮಿಕರು ಕಟ್ಟಡದೊಳಗೆ ಕೆಲಸ ಮಾಡುತ್ತಿದ್ದರು.

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!
ದೆಹಲಿಯ ಮೆಹ್ರೌಲಿಯಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದುರಂತದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ.

