ಕರ್ನಾಟಕ ಹೈಕೋರ್ಟ್

ಆಧಾರ್ ಕಾರ್ಡ್ ವಯಸ್ಸಿನ ಅಧಿಕೃತ ಪುರಾವೆಯಲ್ಲ: ಕರ್ನಾಟಕ ಹೈಕೋರ್ಟ್
ಆಧಾರ್ ಕಾರ್ಡ್ ಕೇವಲ ವ್ಯಕ್ತಿಯ ಗುರುತಿನ ದಾಖಲೆಯೇ ಹೊರತು, ಅದು ಜನ್ಮ ದಿನಾಂಕ ಅಥವಾ ವಯಸ್ಸನ್ನು ದೃಢಪಡಿಸುವ ಅಧಿಕೃತ ಪುರಾವೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಧರ್ಮಸ್ಥಳ ಬುರುಡೆ ಪ್ರಕರಣ: ಒಂದೆಡೆ ತನಿಖೆ ಬೇಕೆನ್ನುತ್ತೀರಿ, ಈಗ FIR ರದ್ದು ಕೋರುತ್ತಿದ್ದೀರಿ; SIT ತನಿಖೆ ರದ್ದು ಕೋರಿದ್ದ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ
ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್ ಅವರ ಎಫ್ಐಆರ್ ರದ್ದತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:

Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ: ಹೈಕೋರ್ಟ್
ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರುವ ಮಾತ್ರಕ್ಕೆ ತಮಗೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು 'ಮುಕ್ತ ಪರವಾನಗಿ' ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ: ಕರ್ನಾಟಕ ಹೈಕೋರ್ಟ್
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಯೋಜನೆ ಉಚಿತ, ಬೆಲೆ ಏರಿಕೆ ಖಚಿತ: ಅಗತ್ಯ ವಸ್ತುಗಳ ದರ ಏರಿಕೆಗೆ ಸರ್ಕಾರದ ವಿರುದ್ದ ಹೈಕೋರ್ಟ್ ಅಸಮಾಧಾನ!
ಸರ್ಕಾರದ ಉಚಿತ ಯೋಜನೆಗಳು ಮತ್ತು ರಾಜ್ಯದಲ್ಲಿ ದಿನೇ ದಿನೇ ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, "ಯೋಜನೆ ಉಚಿತ... ಬೆಲೆ ಏರಿಕೆ ಖಚಿತ" ಎಂದು ಸರ್ಕಾರದ ವಿರುದ್ಧ ವ್ಯಂಗ್ಯಭರಿತವಾಗಿ ಚಾಟಿ ಬೀಸಿದೆ. ಆ ಕುರಿತ ವರದಿ ಇಲ್ಲಿದೆ:

ದಂಪತಿಗಳ ನಡುವಿನ ಕಲಹದಲ್ಲಿ ಮಗುವನ್ನು ಅಸ್ತ್ರವನ್ನಾಗಿ ಬಳಸುವಂತಿಲ್ಲ: ಹೈಕೋರ್ಟ್ ಮಹತ್ವದ ಅಭಿಪ್ರಾಯ
ಪೋಷಕರೊಬ್ಬರು ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ವಾದಿಸುವ ಭರದಲ್ಲಿ, ಮಗುವಿನ ರಕ್ಷಣೆಯ ಹಕ್ಕನ್ನು ಬಲಿಗೊಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

'40% ಕಮಿಷನ್ ಸರ್ಕಾರ' ಜಾಹೀರಾತು: ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್
ಹಿಂದಿನ ಬಿಜೆಪಿ ಸರ್ಕಾರವನ್ನು '40% ಕಮಿಷನ್ ಸರ್ಕಾರ' ಎಂದು ಆರೋಪಿಸಿ ಕಾಂಗ್ರೆಸ್ ನೀಡಿದ್ದ ಜಾಹೀರಾತುಗಳ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

'ಟೀಕೆ ಮಾಡಿದ ಮಾತ್ರಕ್ಕೆ ಕ್ರಿಮಿನಲ್ ಕೇಸ್ ಹಾಕುವಂತಿಲ್ಲ': ಪೊಲೀಸರಿಗೆ ಹೈಕೋರ್ಟ್ ಸೂಚನೆ, ಮಾರ್ಗಸೂಚಿ
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಅಪರಾಧ ಪ್ರಕರಣಗಳ ನೋಂದಣಿಗೆ ಸಂಬಂಧಿಸಿದ ಕಾನೂನು ತತ್ವಗಳು, ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಮತ್ತು ಅನಗತ್ಯ ಬಂಧನದಿಂದ ರಕ್ಷಿಸುವ ಕಾನೂನು ಕ್ರಮಗಳ ಕುರಿತು..

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ: ಹೈಕೋರ್ಟ್ನಲ್ಲಿ ಆದೇಶ ರದ್ದು!
2025ರ ಜುಲೈ 8ರಂದು ರಾಜ್ಯ ಸರ್ಕಾರ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಒಪ್ಪಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

