ಗೌರಿ ಲಂಕೇಶ್
ಗೌರಿ ಲಂಕೇಶ್, ಕಲಬುರ್ಗಿ ಹತ್ಯೆಯ ಹಿಂದೆ ಸಂಘ ಪರಿವಾರ ಕೈವಾಡ; 6 ತಿಂಗಳಲ್ಲಿ ಜೈಲಿಗೆ ಕಳುಹಿಸುತ್ತೇವೆ: RSS ವಿರುದ್ದ ಪ್ರಿಯಾಂಕ್ ಖರ್ಗೆ ಆರೋಪ
ಗೌರಿ ಲಂಕೇಶ್ ಮತ್ತು ಎಂ. ಎಂ. ಕಲ್ಬುರ್ಗಿ ಹತ್ಯೆಯ ಹಿಂದೆ RSS ಕೈವಾಡವಿದ್ದು, ಆರು ತಿಂಗಳೊಳಗೆ ತನಿಖೆ ಹಾಗೂ ವಿಚಾರಣೆಯನ್ನು ಮುಗಿಸಿ, ಇದರ ಹಿಂದಿರುವ ಎಲ್ಲರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಗೌರಿ ಲಂಕೇಶ್ ಹತ್ಯೆಯಿಂದ ಘಾಸಿಗೊಂಡ ಪ್ರಕಾಶ್ ರಾಜ್; ನಾನು ದೇವರನ್ನು ನಂಬುತ್ತೇನೆ, ಅವರು ನಂಬಲ್ಲ: ಪತ್ನಿ ಪೋನಿ ವರ್ಮಾ ಸಂವಾದ!
"ಆರಂಭದಲ್ಲಿ ನನಗೆ ಭಯವಾಗುತ್ತಿತ್ತು. ಗೌರಿ ಅವರ ಸಾವಿನ ಸುದ್ದಿ ಕೇಳಿದಾಗ, ಪ್ರಕಾಶ್ ರಾಜ್ ಅವರು ಸಂಪೂರ್ಣವಾಗಿ ಕುಗ್ಗಿ ಹೋದರು" ಎಂದು ಅವರು ಹೇಳಿದರು.

BMC Election: ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ಗೆ ಪ್ರಚಂಡ ಗೆಲುವು!
ಮಹಾರಾಷ್ಟ್ರ ಪುರಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿವೆ. ಜಲ್ನಾ ಕಾರ್ಪೊರೇಷನ್ನ ವಾರ್ಡ್ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾರೆ.

ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಗೌರಿ ಲಂಕೇಶ್ ಹತ್ಯೆ ಆರೋಪಿ
2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು ಮತ್ತು ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತು.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು
ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು- ದಿನೇಶ್ ಗುಂಡೂರಾವ್
ಸಮಾಜದ ಶಾಂತಿ ಕದಡುವ, ಕೊಲೆ, ಸುಲಿಗೆಯಂತಹ ವಿದ್ವಂಸಕ ಕೃತ್ಯ ನಡೆಸುವವರೆಲ್ಲಾ ಬಿಜೆಪಿಯ ಗರ್ಭಗುಡಿಯಲ್ಲೇ ಇರುತ್ತಾರೆ ಎಂಬುವುದಕ್ಕೆ ಇದೊಂದು ನಿದರ್ಶನ.

'ಗೌರಿ' ಸಿನಿಮಾ ಹಾಡನ್ನು ಸಹೋದರಿಗೆ ಅರ್ಪಿಸಿದ ಇಂದ್ರಜಿತ್ ಲಂಕೇಶ್!
ನಿರ್ದೇಶಕ ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರಜಿತ್ ಲಂಕೇಶ್ ನನ್ನು ಗೌರಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಿಸುತ್ತಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: 3 ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ಗೆ ಹೈಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಮಂಜೂರು
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿರುವ ಎನ್ ಮೋಹನ್ ನಾಯಕ್ ಅಲಿಯಾಸ್ ಸಂಪಾಜೆಗೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

