ಜಿಲ್ಲಾಡಳಿತ

ಕೊಪ್ಪಳ: ಬೀಗ ಒಡೆದು ಹನುಮಂತನ ಜನ್ಮಸ್ಥಳ 'ಅಂಜನಾದ್ರಿ' ದೇವಾಲಯ ಸುಪರ್ದಿಗೆ ಪಡೆದ ಜಿಲ್ಲಾಡಳಿತ!
ಅಕ್ಟೋಬರ್ 2018 ರವರೆಗೆ, ಅಂಜನಾದ್ರಿ ದೇವಾಲಯವನ್ನು ಮುಖ್ಯ ಅರ್ಚಕ ವಿದ್ಯಾಧಾಸ್ ಬಾಬಾ ಅವರ ನೇತೃತ್ವದ ಟ್ರಸ್ಟ್ ನಿರ್ವಹಿಸುತ್ತಿತ್ತು. ಟ್ರಸ್ಟ್ ಮತ್ತು ಬಾಬಾ ಅವರ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿತ್ತು.

ಪ್ರವಾಸಿಗರ ಗಮನಕ್ಕೆ: ಕೊಡಗಿನ ಅನಧಿಕೃತ, ಅವೈಜ್ಞಾನಿಕ ಗ್ಲಾಸ್ ಬ್ರಿಡ್ಜ್ ಬಂದ್
ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ.

ಮಳೆಗಾಲಕ್ಕೆ ಸಜ್ಜಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದು; ಸಮಸ್ಯೆಗಳನ್ನು ನಿಭಾಯಿಸಲು ಸಿದ್ಧತೆ ಆರಂಭಿಸಲು ಸೂಚನೆ
ಮಳೆಗಾಲದಲ್ಲಿ (ಜೂನ್ನಿಂದ ಆಗಸ್ಟ್ವರೆಗೆ) ಪೂರ್ವಭಾವಿಯಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಮಳೆ ಸಂಬಂಧಿತ ಸಮಸ್ಯೆಗಳನ್ನು ಎದುರಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಮಂಗಳವಾರ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂಪಿ ಅವರು ಮುಂಗಾರು ಹಂಗಾಮಿನ ಸವಾಲುಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ನಿರ್ದೇಶನಗಳೊಂದಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಾಮರಾಜನಗರ: ಸುದೀರ್ಘ ಕಾಯುವಿಕೆ ಅಂತ್ಯ, ಮನೆ ಬಾಗಿಲಲ್ಲೇ ಆಧಾರ್ ಪಡೆದ ಆದಿವಾಸಿಗಳು!
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆರಂಭವಾಗಿ ಹದಿನಾಲ್ಕು ವರ್ಷಗಳ ನಂತರ ಹಿಂದುಳಿದ ಚಾಮರಾಜನಗರ ಜಿಲ್ಲೆಯ ದೂರದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಪಡೆದಿದ್ದಾರೆ.

ಬರಪೀಡಿತ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ: ಜಿಲ್ಲಾಡಳಿತದಿಂದ ಕಾರ್ಯಪಡೆ ರಚನೆ
ಸರಕಾರದಿಂದ ಸಿಗುವ ಅಲ್ಪಸ್ವಲ್ಪ ನೆರವಿನಿಂದ ಸರಿಯಾಗಿ ಜೀವನ ನಡೆಸಲು ಸಾಧ್ಯವಾಗದೆ ಬರಪೀಡಿತ ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳ ಜನರು ಕೆಲಸ ಅರಸಿ ನಗರ, ಪಟ್ಟಣಗಳಿಗೆ ವಲಸೆ ಹೋಗುವ ಸಲುವಾಗಿ ತಮ್ಮ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ಸನ್ನಿವೇಶವಿದೆ.

ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 150 'ಗ್ರಾಮ ಒನ್' ಕೇಂದ್ರಗಳು, ಶೀಘ್ರದಲ್ಲೇ ಪ್ರಾರಂಭ
ಬೆಳಗಾವಿ ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 'ಗ್ರಾಮ ಒನ್' ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

ಮಂಕಿಪಾಕ್ಸ್ ಸೋಂಕು ತಡೆ, ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ, ಜಿಲ್ಲಾಡಳಿತಗಳಿಗೆ ಸೂಚನೆ
ಮಂಕಿಪಾಕ್ಸ್ ಸೋಂಕು ಹರಡುವಿಕೆ ತಡೆಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಬಿಬಿಎಂಪಿ ಹಾಗೂ ಎಲ್ಲಾ ಜಿಲ್ಲಾಡಳಿತಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ, ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ: ಡಾ. ಕೆ.ಸುಧಾಕರ್
ಕೋವಿಡ್ ಸಂಭಾವ್ಯ 2 ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37 ಕೋಟಿ 72 ಲಕ್ಷ ರೂಪಾಯಿಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲಾಡಳಿತದಿಂದ ವಾಕ್-ಇನ್ ಕೋವಿಡ್ -19 ಟೆಸ್ಟ್!
ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣಗಳ ಪರಿಶೀಲಿಸಲು ಮಂಡ್ಯ ಜಿಲ್ಲಾಡಳಿತವು ಸ್ವಾಬ್ ಸಂಗ್ರಹಕೇಂದ್ರಗಳಲ್ಲಿ ವಾಕ್-ಇನ್- ಕೋವಿಡ್ ಪರೀಕ್ಷೆಗಳನ್ನು ನಡೆಸಲು ಸಿದ್ಧವಾಗಿದೆ.

