ಪ್ರತಿಭಟನೆ

'ಬಸವ ಮಂಟಪ' ಕೃತಿ ವಿವಾದ: ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆ; ಪುಸ್ತಕ ನಿಷೇಧ..!
‘ಬಸವ ಮಂಟಪ’ ಪುಸ್ತಕದಲ್ಲಿ ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹಾಗೂ ಅವರ ಘನತೆಗೆ ಕುಂದುಂಟುಮಾಡುವ ವಿಚಾರಗಳನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಿ ಬಸವಪರ ಸಂಘಟನೆಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಪ್ರತಿಭಟನೆ ನಡೆಸಿವೆ.

ಮತಪಟ್ಟಿ ಪರಿಷ್ಕರಣೆ ವಿವಾದಕ್ಕೆ ತಿರುಗೇಟು; ಕಲಬುರಗಿಯಲ್ಲಿ BJP ಪಾದಯಾತ್ರೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ..!
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಕಲಬುರಗಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ನಿರ್ಮೂಲನೆ ಮಾಡಿ’ ಎಂಬ ಘೋಷವಾಕ್ಯದ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

BJP ಕೈಗೊಂಬೆಯಾಗದೆ ಧೈರ್ಯ ತೋರಿಸಿ; META ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ; ಅಕೌಂಟ್ ಮರುಸ್ಥಾಪನೆಗೆ ಆಗ್ರಹ..!
ಪ್ರತಿಪಕ್ಷಗಳ ನಾಯಕರು, ಪತ್ರಕರ್ತರು ಮತ್ತು ಸಾಮಾಜಿಕ ಜಾಲತಾಣದ ಮೂಲಕ ಪ್ರಭಾವ ಬೀರುವವರ ಖಾತೆಗಳ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಬೇಕು. ಬಿಜೆಪಿ ರಾಜಕೀಯ ಸೂಚನೆಗಳನ್ನು ಪಾಲಿಸುವ ಬದಲು ಸಂವಿಧಾನಕ್ಕೆ ಗೌರವ ನೀಡಬೇಕು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ 5ನೇ ದಿನಕ್ಕೆ ; ಅಹೋರಾತ್ರಿ ಧರಣಿ: ಮುಖ್ಯಮಂತ್ರಿಗಳ ಮನವೊಲಿಕೆ ಪ್ರಯತ್ನ ವಿಫಲ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನೆ ಹಿಂಪಡೆಯುವಂತೆ ಕಾರ್ಯಕರ್ತೆಯರ ಮನವೊಲಿಸಲು ಪ್ರಯತ್ನಿಸಿದರೂ, ಫಲ ಕೊಟ್ಟಿಲ್ಲ. ಪ್ರತಿಭಟನೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ.

ಮೇಕೆದಾಟು ಅಣೆಕಟ್ಟು: ಸಿಎಂ ನಿಲುವಿಗೆ ವಿರೋಧ; ಕಾವೇರಿ ನದಿಯ ಮರಳಿನಲ್ಲಿ ಹೂತುಕೊಂಡು ತಮಿಳುನಾಡು ರೈತರ ಪ್ರತಿಭಟನೆ!
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲೇಬೇಕೆಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪದೇ ಪದೇ ನೀಡುತ್ತಿರುವ ಹೇಳಿಕೆಗಳ ವಿರುದ್ಧವೂ ರೈತರು ಆಕ್ರೋಶ ವ್ಯಕ್ತಪಡಿಸಿದರು.

15 ಸಾವಿರ ರೂ ಗೌರವಧನಕ್ಕಾಗಿ ಹೋರಾಟ: ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ HDK; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ಸಂಬಂಧಪಟ್ಟ ಸಚಿವರು ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ತಾಯಂದಿರು ಹೀಗೆ ಪ್ರತಿಭಟನೆ ನಡೆಸುತ್ತಿದ್ದರೂ ಮೌನವಾಗಿರುವುದು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ.

ಹಾಸನ: ಎರಡು ದಿನಗಳಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ಬಲಿ; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ! Video
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಇಂದು ಬೆಳಿಗ್ಗೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ 64 ವರ್ಷದ ವೃದ್ಧನೊಬ್ಬ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಲ್ಲಿ ಸಂಭವಿಸಿದ ಎರಡನೇ ಕಾಡಾನೆ ದಾಳಿಯ ಸಾವು ಇದಾಗಿದೆ.

ರಾಜಮನೆತನದ ವಿರುದ್ಧ ಹೇಳಿಕೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರತಿಭಟನೆ..!
ಇತ್ತೀಚಿನ ಬೆಳವಣಿಗೆಗೆ ಸಂಬಂಧಿಸಿದಂತೆ ರಾಜಮನೆತನದ ವಿರುದ್ಧ ಪ್ರತಿಭಟನೆ ಕೈಬಿಡುವಂತೆ ಪ್ರಮೋದಾದೇವಿ ಒಡೆಯರ್ ವಿವಿಧ ಸಂಘಟನೆಗಳಿಗೆ ಮನವಿ ಮಾಡಿದ್ದರೂ, ಹೋರಾಟ ಸಮಿತಿ ಪ್ರತಿಭಟನೆ ಮುಂದುವರಿಸಿದೆ.

ಸಿಎಂ ಶಿವಕುಮಾರ್, ಝೈದ್ ಖಾನ್ಗೆ ಅವಮಾನ: ಧನ್ವೀರ್ ವಿರುದ್ಧ NSUI ದೂರು; ಅಭಿಮಾನಿಗಳಿಂದ ಪ್ರತಿಭಟನೆ!
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ಗೌಡ ನಡುವಿನ ಕೋಲ್ಡ್ ವಾರ್ ಈಗ ಮತ್ತೊಂದು ಮಜಲನ್ನು ಪಡೆದುಕೊಂಡಿದೆ. ಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಪುತ್ರ ಝೇದ್ ಖಾನ್ ಬಗ್ಗೆ ನಟ ಧ್ವನ್ವೀರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

