ರಾಜ್ಯಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಸಭಾಪತಿಗಳ ಮುಂದೆ ಕೈ ಕೈ ಮಿಲಾಯಿಸಲು ಮುಂದಾದ ಸದಸ್ಯರು
ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ ಎಂಬ ಆರೋಪ ಇಂದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.