ರಾಜ್ಯಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದ ಶಿಫ್ಟ್!
ಇತ್ತೀಚಿಗೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.