ಶಿವಮೊಗ್ಗ: ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ ಜಾರಿಗೆ ತರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ
ಶುಕ್ರವಾರ ಜೋಗ ಜಲಪಾತ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಗಾಗಲೇ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರ ನೇತೃತ್ವದಲ್ಲಿ ಪ್ರವಾಸೋದ್ಯಮ ಕಾರ್ಯ ಪಡೆ ರಚಿಸಲಾಗಿದೆ ಎಂದರು.
ತಾವು ಮೊದಲು ಪ್ರಸಿದ್ಧ ಸ್ಥಳಗಳಲ್ಲಿ ಪ್ರವಾಸ ಕೈಗೊಂಡು, ನಂತರ ಯೋಜನೆ ರೂಪಿಸುವಂತಹ ಕಾರ್ಯ ಮಾಡುತ್ತೇನೆ. ಪಶ್ಚಿಮ ಘಟ್ಟ, ಕರಾವಳಿ ಸೇರಿ ಇತರ ಪ್ರದೇಶಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದರು.
ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬೇಕು ಎಂಬುದು ನನ್ನ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರ ಜೊತೆಗೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಜೊತೆಗಿದ್ದರು.
Advertisement