ಜನವರಿಯಿಂದ ಹುಂಡೈ ಕಾರುಗಳ ದರ ಏರಿಕೆ!

ಆಟೋ ಮೊಬೈಲ್ ಕ್ಷೇತ್ರ ತೀವ್ರ ಹಿನ್ನಡೆ ಎದುರಿಸುತ್ತಿರುವ ಹೊತ್ತಿನಲ್ಲೇ ಖ್ಯಾತ ಕಾರು ತಯಾರಿಕಾ ಸಂಸ್ಥೆ ಹುಂಡೈ ತನ್ನಗ್ರಾಹಕರಿಗೆ ಶಾಕ್ ನೀಡಿದ್ದು, ಜನವರಿಯಿಂದ ತನ್ನ ಕಾರುಗಳ ಬೆಲೆ ಏರಿಕೆ ಮಾಡುವುದಾಗಿ ಘೋಷಣೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಆಟೋ ಮೊಬೈಲ್ ಕ್ಷೇತ್ರ ತೀವ್ರ ಹಿನ್ನಡೆ ಎದುರಿಸುತ್ತಿರುವ ಹೊತ್ತಿನಲ್ಲೇ ಖ್ಯಾತ ಕಾರು ತಯಾರಿಕಾ ಸಂಸ್ಥೆ ಹುಂಡೈ ತನ್ನಗ್ರಾಹಕರಿಗೆ ಶಾಕ್ ನೀಡಿದ್ದು, ಜನವರಿಯಿಂದ ತನ್ನ ಕಾರುಗಳ ಬೆಲೆ ಏರಿಕೆ ಮಾಡುವುದಾಗಿ ಘೋಷಣೆ ಮಾಡಿದೆ.

ಕಾರುಗಳ ಬಿಡಿಭಾಗಗಳ ದರ ಏರಿಕೆ ಹಿನ್ನಲೆಯಲ್ಲಿ ತಾನೂ ಕೂಡ ಕಾರಿನ ಬೆಲೆ ಏರಿಕೆ ಮಾಡುತ್ತಿರುವುದಾಗಿ ಹ್ಯುಂಡೈ ಮೋಟರ್ ಇಂಡಿಯಾ ಲಿಮಿಟೆಡ್ (HMIL) ಸಂಸ್ಥೆ ಹೇಳಿಕೆ ಬಿಡುಗಡೆ ಮಾಡಿದೆ. ಅಲ್ಲದೆ ಜನವರಿಯಿಂದ ವಿವಿಧ ಮಾದರಿಯ ಇಂಧನ ಕಾರುಗಳ ಬೆಲೆಯಲ್ಲಿ ವ್ಯತ್ಯಾಸ ಕಂಡುಬರಲಿದೆ ಎಂದೂ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಕಾರುಗಳ ಬೆಲೆ ಏರಿಕೆ ಕುರಿತು ಸಂಸ್ಥೆ ಹೇಳಿಕೆ ನೀಡಿದೆಯಾದರೂ ಯಾವ ಬಿಡಿಭಾಗಗಳ ದರ ಏರಿಕೆ ಮಾಡಲಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿಲ್ಲ. ಅಲ್ಲದೆ ಯಾವ ಕಾರಿನ ಮಾಡೆಲ್ ಗಳ ಬೆಲೆ ಏರಿಕೆಯಾಗುತ್ತಿದೆ ಎಂಬುದನ್ನೂ ಸಂಸ್ಥೆ ಮಾಹಿತಿ ನೀಡಿಲ್ಲ. 

ಈ ಇತ್ತೀಚೆಗಷ್ಟೇ ಇತರೆ ಕಾರು ತಯಾರಿಕಾ ಸಂಸ್ಥೆಗಳಾದ ಮಾರುತಿ ಸುಜುಕಿ ಮತ್ತು ಟಾಟಾ ಮೋಟಾರ್ಸ್ ಸಂಸ್ಥೆಗಳು ತಮ್ಮ ಕಾರುಗಳ ಬೆಲೆ ಏರಿಕೆ ಮಾಡುವುದಾಗಿ ಘೋಷಣೆ ಮಾಡಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com