ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತ

ಕೃಷ್ಣರಾಜ ಸಾಗರ ಜಲಾಶಯದಿಂದ (ಕೆಆರ್‌ಎಸ್) ಹೊರಹರಿವು ಹೆಚ್ಚಾಗಿರುವ ಕಾರಣ ಪ್ರಸಿದ್ಧ ಪ್ರವಾಸೋದ್ಯಮ ತಾಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಶನಿವಾರದಿಂದ ಬೋಟಿಂಗ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯದಿಂದ (ಕೆಆರ್‌ಎಸ್) ಹೊರಹರಿವು ಹೆಚ್ಚಾಗಿರುವ ಕಾರಣ ಪ್ರಸಿದ್ಧ ಪ್ರವಾಸೋದ್ಯಮ ತಾಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಶನಿವಾರದಿಂದ ಬೋಟಿಂಗ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಕಾವೇರಿ ನದಿ ಹರಿವು ಏರಿಕೆಯಾಗಿದ್ದು, ಪ್ರವಾಸಿಗರ ಸುರಕ್ಷತೆಯನ್ನು ಪರಿಗಣಿಸಿ ಕಾರ್ಯಾಚರಣೆಯನ್ನು ಮುಂದುವರಿಸುವುದು ಸೂಕ್ತವಲ್ಲ ಎಂದು ನಿರ್ಧರಿಸಲಾಗಿದ್ದು, ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಆದಾಗ್ಯೂ, ಅಭಯಾರಣ್ಯಕ್ಕೆ ಭೇಟಿ ನೀಡುವವರಿಗೆ ಯಾವುದೇ ನಿರ್ಬಂಧಗಳಿಲ್ಲ. ನದಿ ಜಾಗದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. 
ರಂಗನತಿಟ್ಟಿಗೆ ಪ್ರತಿ ದಿನ ಐದರಿಂದ ಆರು ಸಾವಿರ ಪ್ರವಾಸಿಗರು ಭೇಟಿ ನೀಡುತ್ತಿದ್ದು ರಜಾ ದಿಉನ, ವಾರಾಂತ್ಯಗಳಲ್ಲಿ ಈ ಸಂಖ್ಯೆ ಎಂಟರಿಂದ ಹತ್ತು ಸಾವಿರದ ಗಡಿ ದಾಟುತ್ತದೆ.  ಆಪ್ರವಾಸಿಗರ ಪೈಕಿ ಶೇ. ೮೦ಕ್ಕೆ ಹೆಚ್ಚು ಮಂದಿ ದೋಣಿ ವಿಹಾರ ಮಾಡುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com