ಶತಮಾನದ ಇತಿಹಾಸ ಹೊಂದಿರುವ ದಾಂಡೇಲಿ-ಧಾರವಾಡ ರೈಲು ಮಾರ್ಗಕ್ಕೆ ಚಾಲನೆ

ಶತಮಾನದ ಇತಿಹಾಸ ಹೊಂದಿರುವ ಹಲವು ವರ್ಷಗಳಿಂದ ನಿಂತು ಹೋಗಿದ್ದ  ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭಾನುವಾರ ಚಾಲನೆ ನೀಡಿದ್ದಾರೆ.
ಶತಮಾನದ ಇತಿಹಾಸ ಹೊಂದಿರುವ ದಾಂಡೇಲಿ-ಧಾರವಾಡ ರೈಲು ಮಾರ್ಗಕ್ಕೆ ಚಾಲನೆ
ಶತಮಾನದ ಇತಿಹಾಸ ಹೊಂದಿರುವ ದಾಂಡೇಲಿ-ಧಾರವಾಡ ರೈಲು ಮಾರ್ಗಕ್ಕೆ ಚಾಲನೆ

ಕಾರವಾರ: ಶತಮಾನದ ಇತಿಹಾಸ ಹೊಂದಿರುವ ಹಲವು ವರ್ಷಗಳಿಂದ ನಿಂತು ಹೋಗಿದ್ದ  ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭಾನುವಾರ ಚಾಲನೆ ನೀಡಿದ್ದಾರೆ.

ಧಾರವಾಡ ರೈಲು ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಪ್ಯಾಸೆಂಜರ್ ರೈಲಿಗೆ ಸಚಿವರು ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದ್ದಾರೆ. ಕಾರ್ಯಕ್ಕ್ರಮದಲ್ಲಿ  ಮಾಜಿ ಸಚಿವ ಆರ್.ವಿ ದೇಶಪಾಂಡೆ, ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕಾ, ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ  ಸೇರಿ ಅನೇಕ ಗಣ್ಯ ಅತಿಥಿಗಳು ಭಾಗವಹಿಸಿದ್ದರು.

ಶತಮಾನದ ಇತಿಹಾಸವಿರುವ ಅಂಬೇವಾಡಿ-ಅಳ್ನಾವರ ರೈಲ್ವೆ ಮಾರ್ಗದಲ್ಲಿ 1918ರಲ್ಲಿ ರೈಲು ಸಂಚಾರ ಪ್ರಾರಂಭವಾಗಿತ್ತು.ಇದು ಬೆಳಗಾವಿಹಾಗೂ ಹುಬ್ಬಳ್ಳಿ ಮುಖ್ಯ ರೈಲು ಮಾರ್ಗಕ್ಕೆ ಸಂಪರ್ಕ ಹೊಂದಿತ್ತು. ಅಂದಿನ ಮದ್ರಾಸ್ ಹಾಗೂ ಸರ್ದನ್ ಮರಾಠ (ಮಹಾರಾಷ್ಟ್ರ) ರೈಲ್ವೆ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ನೋಡಿಕೊಳ್ಳುತ್ತಿತ್ತು. ಆದರೆ 1994ರಲ್ಲಿ ಈ ಮಾರ್ಗವನ್ನು ಮೀಟರ್ ಗೇಜ್ ನಿಂದ ಬ್ರಾಡ್ ಗೇಜ್ ಗೆ ಪರಿವರ್ತಿಸಿದ್ದು ರೈಲು ಸಂಚಾರ ನಿಂತು ಹೋಗಿತ್ತು.ಅದಾಗಿ 1995ರಲ್ಲಿ ಅಳ್ನಾವರದಿಂದ ಅಂಬೆವಾಡಿವರೆವಿಗೆ ರೈಲು ಸಂಚಾರ ಪುನಾರಂಬವಾಗಿತ್ತು. ಆದರೆ ದಾಂಡೇಲಿಯ ಜನರು ತಮ್ಮ ಭಾಗಕ್ಕೂ ಪ್ಯಾಸೆಂಜರ್ ರೈಲು ಸೇವೆ ಒದಗಿಸಬೇಕೆಂದು ಎರಡು ದಶಕಗಳಿಂದ ಹೋರಾಟ ನಡೆಸುತಾ ಬಂದಿದ್ದರು. ಮಾಜಿ ಸಚಿವ ಆರ್.ವಿ ದೇಶಪಾಂಡೆ ಈ ಸಂಬಂಧ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದರು. ಇದೀಗ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ರೈಲ್ವೆ ಸೇವೆ ಪುನಾರಂಭ ಂಆಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com