ಯಮಹಾ ಎಫ್‍‌ಜೆಡ್-ಎಕ್ಸ್ ರೆಟ್ರೋ ಡಿಸೈನ್ ಬೈಕ್ ಬಿಡುಗಡೆ: ಬೈಕ್ ವೈಶಿಷ್ಟ್ಯ, ಬೆಲೆ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ

ಖ್ಯಾತ ಬೈಕ್ ತಯಾರಿಕಾ ಸಂಸ್ಥೆಯ ಬಹು ನಿರೀಕ್ಷಿತ ಎಫ್‍‌ಜೆಡ್-ಎಕ್ಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಈ ಬೈಕ್ ನ ವೈಶಿಷ್ಟ್ಯ, ಬೆಲೆಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Published: 19th June 2021 02:25 PM  |   Last Updated: 19th June 2021 02:46 PM   |  A+A-


Yamaha FZ-X

ಯಮಹಾ ಬೈಕ್ FZ-X

Posted By : Srinivasamurthy VN
Source : The New Indian Express

ನವದೆಹಲಿ: ಖ್ಯಾತ ಬೈಕ್ ತಯಾರಿಕಾ ಸಂಸ್ಥೆಯ ಬಹು ನಿರೀಕ್ಷಿತ ಎಫ್‍‌ಜೆಡ್-ಎಕ್ಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಈ ಬೈಕ್ ನ ವೈಶಿಷ್ಟ್ಯ, ಬೆಲೆಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಯಮಹಾ ಮೋಟಾರ್ ಇಂಡಿಯಾ ಕಂಪನಿಯು ಹೊಸ ಎಫ್‍‌ಜೆಡ್-ಎಕ್ಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಯಮಹಾ ಎಫ್‌ಜೆಡ್-ಎಕ್ಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯೊಂದಿಗೆ ವೈ-ಕನೆಕ್ಟ್ ಅಪ್ಲಿಕೇಶನ್‌ನಂತಹ ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿದೆ. ಹೊಸ ಯಮಹಾ  ಎಫ್‍‍ಝಡ್-ಎಕ್ಸ್ 2 ಮಾದರಿಗಳಲ್ಲಿ ಲಭ್ಯವಿದ್ದು, ಈ ಹೊಸ ಯಮಹಾ ಎಫ್‍ಜೆಡ್-ಎಕ್ಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೊರೂಂ ಪ್ರಕಾರ ರೂ.1.16 ಲಕ್ಷಗಳಾಗಿದೆ. ಇದರ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.1,16,800 ಗಳಾದರೆ, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹೊಂದಿರುವ ರೂಪಾಂತರ ಬೈಕ್ ನ  ಬೆಲೆಯು ರೂ.1,19,800 ಗಳಾಗಿದೆ. 

ಹೊಸ ಯಮಹಾ ಎಫ್‍‍ಜೆಡ್-ಎಕ್ಸ್ ಬೈಕ್ ವೃತ್ತಾಕಾರದ ಹೆಡ್ ಲ್ಯಾಂಪ್‌ ಗಳು ಮತ್ತು ಟಿಯರ್-ಡ್ರಾಪ್ ಫ್ಯೂಯಲ್ ಟ್ಯಾಂಕ್‌ನೊಂದಿಗೆ ರೆಟ್ರೊ-ರೋಡ್ಸ್ಟರ್ ಅನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್ ಮಧ್ಯದಲ್ಲಿ ಬ್ಲ್ಯಾಕ್ ಮೆಟಲ್ ಸ್ಟ್ರಿಪ್ ಅನ್ನು ಹೊಂದಿದ್ದು, ಇನ್ನು ಈ ಬೈಕ್ ಮ್ಯಾಟ್ ಬ್ಲೂ, ಮ್ಯಾಟ್ ಬ್ಲ್ಯಾಕ್ ಮತ್ತು ಮ್ಯಾಟ್  ಕೂಪರ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಬೈಕ್ ಲಭ್ಯವಿದೆ. ಈ ಹೊಸ ಬೈಕಿನಲ್ಲಿ ಇಂಟೆಗ್ರೇಟೆಡ್ ಡಿಆರ್‌ಎಲ್‌ಗಳೊಂದಿಗಿನ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್‌ಲ್ಯಾಂಪ್, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಸೈಡ್-ಸ್ಟ್ಯಾಂಡ್ ಎಂಜಿನ್ ಸ್ವಿಚ್ ಕಿಲ್, ಅಪ್ ಸ್ಪೆಪ್ಟ್ ಎಕ್ಸಾಸ್ಟ್, ಮೊಬೈಲ್ ಚಾರ್ಜಿಂಗ್ ಸಾಕೆಟ್ ಮತ್ತು ಇತರೆ ಫೀಚರ್ಸ್ ಗಳನ್ನು ಹೊಂದಿವೆ.

ಇಂಜಿನ್ ಸಾಮರ್ಥ್ಯ
ಯಮಹಾ ಎಫ್‍‍ಝಡ್-ಎಕ್ ಬೈಕ್ 149 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 12.2 ಬಿಹೆಚ್‌ಪಿ ಮತ್ತು 13.3 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಟ್ರಾನ್ಸ್‌ಮಿಷನ್‌ ಅನ್ನು ಜೋಡಿಸಲಾಗಿದೆ. ಈ  ಬೈಕ್ 1330 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿರಲಿದೆ. ಇದೇ ಸರಣಿಯ ಎಫ್‌ಜೆಡ್-150 ಬೈಕ್ ಕೂಡ ಇದೇ ರೀತಿಯ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಮುಂಭಾಗದಲ್ಲಿ 282 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್  ಎಬಿಎಸ್ ಅನ್ನು ಕೂಡ ಬೈಕ್ ಹೊಂದಿರಲಿದೆ. 

ದೈನಂದಿನ ಪ್ರಯಾಣಕ್ಕೆ ಅಗತ್ಯವಾದ ಸೌಕರ್ಯ
ಇನ್ನು ಬೈಕ್ ಕುರಿತು ಮಾಹಿತಿ ನೀಡಿದ ಯಮಹಾ ಮೋಟರ್ ಇಂಡಿಯಾ ಸಂಸ್ಥೆಯ ಅಧ್ಯಕ್ಷ ಮೊಟೊಫುಮಿ ಶಿತಾರಾ ಅವರು, 'ದೈನಂದಿನ ಪ್ರಯಾಣಕ್ಕೆ ಅಗತ್ಯವಾದ ಸೌಕರ್ಯಗಳಿಗೆ ಧಕ್ಕೆಯಾಗದಂತೆ ಉಚಿತ ಸವಾರಿ ಮಾಡಲು ಮತ್ತು ಯಮಹಾದ ಪ್ರಮುಖ ತಂತ್ರಜ್ಞಾನ, ಕಾರ್ಯಕ್ಷಮತೆ ಮತ್ತು ಶೈಲಿಯನ್ನು  ಆನಂದಿಸಲು ಬಯಸುವ ದೊಡ್ಡ ಗುಂಪಿನ ಗ್ರಾಹಕರನ್ನು ಪೂರೈಸಲು ಇದನ್ನು ಪರಿಚಯಿಸಲಾಗಿದೆ. ಭಾರತದಲ್ಲಿನ ನಮ್ಮ ಗ್ರಾಹಕರಿಗೆ ಇಂತಹ ಅತ್ಯಾಕರ್ಷಕ ಉತ್ಪನ್ನಗಳು ಮತ್ತು ಅನುಭವಗಳನ್ನು ನೀಡುವುದನ್ನು ನಾವು ಮುಂದುವರೆಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಯಮಹಾ ಫ್ಯಾಸಿನೊ 125 ಫೈ ಹೈಬ್ರಿಡ್ ಸ್ಕೂಟರ್ ಅನ್ನು ಸಹ ಅನಾವರಣಗೊಳಿಸಿತು.


Stay up to date on all the latest ಪ್ರವಾಸ-ವಾಹನ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp