ವಿಡಿಯೋ
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಎರಡು ಕಂಚಿನ ಪದಕ ಗೆದ್ದ ಭಾರತದ ಯುವ ಶೂಟರ್ ಮನು ಭಾಕರ್ ಬುಧವಾರ ಬೆಳಗ್ಗೆ ತಮ್ಮ ಕೋಚ್ ಜಸ್ಪಾಲ್ ರಾಣಾ ಜೊತೆಗೆ ತವರಿಗೆ ಆಗಮಿಸಿದ್ದಾರೆ. ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಅದ್ದೂರಿಯಿಂದ ಸ್ವಾಗತಿಸಿದರು.
ಪ್ಯಾರಿಸ್ ಗೇಮ್ಸ್ ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಮತ್ತು 10 ಮೀಟರ್ ಮಿಶ್ರ ಟೀಮ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಮತ್ತೊಂದು ಕಂಚಿನ ಪದಕ ಪಡೆದರು.
Advertisement