ವಿಡಿಯೋ
ತುಂಗಭದ್ರಾ ಜಲಾಶಯದಲ್ಲಿ ಮುರಿದುಹೋಗಿದ್ದ 19ನೇ ಗೇಟ್ ನಲ್ಲಿ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದ್ದು ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದೆ. ತಜ್ಞ ಕನ್ನಯ್ಯ ನಾಯ್ಡು ತಂಡ ಮೂರು ದಿನಗಳಿಂದ ಸ್ಟಾಪ್ ಲಾಗ್ ಅಳವಡಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತ್ತು. ಕೇವಲ 2 ದಿನಗಳ ಅವಧಿಯಲ್ಲಿ ಒಟ್ಟು 5 ಸ್ಟಾಪ್ ಲಾಗ್ ಗಳನ್ನು ಅಳವಡಿಸಿ ನೀರು ಪೋಲಾಗದಂತೆ ತಡೆಯಲಾಗಿದೆ.
Advertisement