ವಿಡಿಯೋ
ಥಾಣೆಯ ಶಾಲೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಮಹಾರಾಷ್ಟ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಲ್ಲಿನ ಬದ್ಲಾಪುರ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ , ಘಟನೆ ಸಂಬಂಧ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಏತನ್ಮಧ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ ಪ್ರಕರಣವನ್ನ ಎಸ್ಐಟಿ ತನಿಖೆಗೆ ಆದೇಶಿಸಿದೆ.
Advertisement