ವಿಡಿಯೋ
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟ ಮಾಡುತ್ತೇವೆ.
ಅಲ್ಲದೆ ಆ.31ರಂದು ರಾಜಭವನ ಚಲೋ ಮೂಲಕ ರಾಜಭವನಕ್ಕೆ ತೆರಳಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್ ಇದೆ ಅದನ್ನು ಜಾರಿಗೆ ತನ್ನಿ ಎಂದು ಮನವಿ ಸಲ್ಲಿಸುತ್ತೇವೆ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮನ್ನು ತಾವು ಸಚ್ಚಾ ಎಂದು ಹೇಳಿಕೊಳ್ಳುತ್ತಾರೆ.
ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆದೇಶ ತಾವು ಸಹಿ ಮಾಡಿಲ್ಲ ಎಂದು ಹೇಳಿದ್ದಾರೆ.
ಅದು ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.
Advertisement