ವಿಡಿಯೋ
ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿ ವಿಶೇಷ ಆತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ನಟ ದರ್ಶನ್ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಕೇಂದ್ರ ಕಾರಾಗೃಹವನ್ನು ಸಾಮಾನ್ಯ ಕೈದಿಯಂತೆ ಪ್ರವೇಶಿಸಿದ್ದಾರೆ.
ಕಪ್ಪು ಟೀ ಶರ್ಟ್ ತೊಟ್ಟು, ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬೆಡ್ ಶೀಟ್ , ಬಲಗೈಯಲ್ಲಿ ನೀರಿನ ಬಾಟಲ್ ಹಿಡಿದುಕೊಂಡು ದರ್ಶನ್ ಜೈಲಿನೊಳಗೆ ಪ್ರವೇಶಿಸಿದ್ದಾರೆ.
ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಬಳ್ಳಾರಿ ಕಾರಾಗೃಹದ ಸೆಲ್ ನಂಬರ್ 15ರಲ್ಲಿ ಅವರನ್ನು ಇರಿಸಲಾಗುತ್ತಿದೆ.
Advertisement