ವಿಡಿಯೋ
ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು.
ಗುರುವಾರ ಬೆಳಗ್ಗೆ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು.
ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕಕ್ಕೆ (NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು.
Advertisement