ವಿಡಿಯೋ
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಗೆಹ್ಲೋಟ್ ಅವರ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು ಶನಿವಾರ ‘ರಾಜಭವನ ಚಲೋ’ ನಡೆಸಿದರು.
ಇದಕ್ಕೂ ಮುನ್ನ ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು, ಶಾಸಕರು ಮತ್ತು ಖಂಡಿಸಿ ಧರಣಿ ನಡೆಸಿದರು.
ನಂತರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿದರು.
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.
Advertisement