ವಿಡಿಯೋ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ರಾಜ್ಯಸಭೆಯಲ್ಲಿ 75 ವರ್ಷಗಳ ಸಂವಿಧಾನದ ಚರ್ಚೆಯನ್ನು ಆರಂಭಿಸಿ, ಭಾರತದ ಸಂವಿಧಾನ ಕಾಲದ ಪರೀಕ್ಷೆ ಮೇಲೆ ನಿಂತಿದೆ ಎಂದು ಪ್ರತಿಪಾದಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಜಾಪ್ರಭುತ್ವವನ್ನು ಬಲಪಡಿಸುವ ಬದಲು, ಅಧಿಕಾರದಲ್ಲಿರುವವರನ್ನು ರಕ್ಷಿಸಲು ಸಂವಿಧಾನವನ್ನು ತಿದ್ದುಪಡಿ ಮಾಡಿದ್ದರು ಎಂದು ಆರೋಪಿಸಿದರು.
ಇದೇ ವೇಳೆ, ಜಿಎಸ್‌ಟಿಯನ್ನು "ಗಬ್ಬರ್ ಸಿಂಗ್ ಟ್ಯಾಕ್ಸ್" ಎಂದು ಅಣಕಿಸುತ್ತಿರುವ ಕಾಂಗ್ರೆಸ್ ಕುರಿತು, ಇದು ಅಗೌರವದ ನಿಲುವು ಎಂದು ನಿರ್ಮಲಾ ಸೀತಾರಾಮನ್ ಟೀಕಿಸಿದ್ದಾರೆ. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.
Advertisement