ವಿಡಿಯೋ
ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮುಗಿಬಿದ್ದಿರುವ ಕಾಂಗ್ರೆಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಟೀಕೆ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಮಿತ್ ಶಾ, ಇತ್ತೀಚಿನ ದಿನಗಳಲ್ಲಿ ಎಲ್ಲಾ ವಿಷಯಗಳಿಗೂ ಅಂಬೇಡ್ಕರ್ ಹೆಸರನ್ನು ತೆಗೆದುಕೊಳ್ಳುವುದು ಒಂದು ರೀತಿಯ ಫ್ಯಾಷನ್ ಆಗಿದೆ ಎಂದು ಹೇಳಿದ್ದರು.
ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ವಿಪಕ್ಷಗಳು ಅಮಿತ್ ಶಾ ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆ ಎಂದು ಸಂಸತ್ತಿನ ಹೊರಗಡೆ ಪ್ರತಿಭಟನೆ ನಡೆಸಿದ್ದವು. ವಿಡಿಯೋ ಇಲ್ಲಿದೆ ನೋಡಿ.
Advertisement