ವಿಡಿಯೋ
Watch | NDA-INDIA ಬ್ಲಾಕ್ ಮುಖಾಮುಖಿ; ಬಿಜೆಪಿ ಸಂಸದನಿಗೆ ಗಾಯ!
ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆ ಪ್ರತಿಪಕ್ಷಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಅಮಿತ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ಸದಸ್ಯರು ಇಂದು ನೀಲಿ ಬಣ್ಣದ ಬಟ್ಟೆಯನ್ನು ಧರಿಸಿ ಸಂಸತ್ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇಂಡಿಯಾಗೆ ವಿರುದ್ಧವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದರು ಅಂಬೇಡ್ಕರ್ ಅವರನ್ನು ಅವಮಾನಿಸಿದ ಪ್ರತಿಪಕ್ಷ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಒಂದು ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ಪ್ರತಿಭಟನಾ ಮೆರವಣಿಗೆ ಮುಖಾಮುಖಿಯಾಗಿದ್ದು, ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರು ಗಾಯಗೊಂಡಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ