ವಿಡಿಯೋ
ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿವೆ.
ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಶುಕ್ರವಾರ ರಾತ್ರಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಈ ಸಂಗೀತ ಕಾರ್ಯಕ್ರಮವೂ ಗ್ರ್ಯಾಂಡ್ ಫಿನಾಲೆಯಾಗಿ ಮಾರ್ಪಟ್ಟಿದ್ದು, ಅಂಬಾನಿ ಕುಟುಂಬ ಸಹ ಹೆಜ್ಜೆ ಹಾಕಿದೆ.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಬಹು ನಿರೀಕ್ಷಿತ ವಿವಾಹವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ.
Advertisement