ವಿಡಿಯೋ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಆರೋಪಿಸಿ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಮಾರ್ಗ ಮಧ್ಯದಲ್ಲಿಯೇ ವಶಕ್ಕೆ ಪಡೆದರು.
ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಬೃಹತ್ ರ್‍ಯಾಲಿ ನಡೆಸುವ ಮೂಲಕ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಯೋಜಿಸಲಾಗಿತ್ತು.
ಆದರೆ, ಮೈಸೂರು ರೋಡ್ ಕದಂಬ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರನ್ನು ಮುಂದಕ್ಕೆ ತೆರಳಲು ಪೊಲೀಸರು ಅವಕಾಶ ನೀಡಲಿಲ್ಲ. ಅವರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದರು.
Advertisement